ಬೆಳಗಾವಿ ಅಧಿವೇಶನದ ಶತಮಾನೋತ್ಸವ ಬೆಂಗಳೂರಲ್ಲಿ ಸಭೆ

ಬೆಳಗಾವಿ- 1924 ರಲ್ಲಿ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆಯ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ ಸಭೆ ನಡೆಸಿದೆ.

ಬೆಳಗಾವಿ-ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಬೆಳಗಾವಿ ಅಧಿವೇಶನದ ಶತಮಾನೋತ್ಸವದ ಅದ್ಧೂರಿ ಆಚರಣೆಯ ಕುರಿತು ಪೂರ್ವ ಭಾವಿ ಸಭೆ ನಡೆದಿದೆ.

ಕರ್ನಾಟಕದ ಎರಡನೇ ರಾಜಧಾನಿ ಎನಿಸಿಕೊಂಡಿರುವ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನವನ್ನು ಅದ್ದೂರಿಯಾಗಿ ಸಂಘಟಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಈ ವೇಳೆ ಸಚಿವ ಸಂಪುಟ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಲೋಕಸಭಾ ಹಾಗೂ ರಾಜ್ಯಸಭಾ ಸದಸ್ಯರು ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *