ಮೂರು ತಿಂಗಳಿಗೊಮ್ಮೆ,ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಮೀಟೀಂಗ್ ನಡೆಯಲಿ

ಬೆಳಗಾವಿ- ಮೂರು ತಿಂಗಳಿಗೊಮ್ಮೆ,ಬೆಳಗಾವಿಯ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಮೀಟೀಂಗ್ ನಡೆಸುವದು,ರಾಜ್ಯಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದರು.

ಬೆಳಗಾವಿಯ ಸುವರ್ಣಸೌಧ ಉತ್ತರ ಕರ್ನಾಟಕದ ಅಭಿವೃದ್ಧಿಗೆ ದಿಕ್ಸೂಚಿ ಆಗಬೇಕು,ಇದು ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಆಗಬೇಕು,500 ಕೋಟಿ ಖರ್ಚು ಮಾಡಿ ಕಟ್ಟಿದ ಈ ಕಟ್ಟಡ ನಿರಂತರವಾಗಿ ಕ್ರೀಯಾಶೀಲ ಆಗುವ ನಿಟ್ಟಿನಲ್ಲಿ ಸರ್ಕಾರ ರಾಜ್ಯಮಟ್ಟದ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರ ಮಾಡಬೇಕು ತಪ್ಪದೇ ಮೂರು ತಿಂಗಳಿಗೊಮ್ಮೆ ಸುವರ್ಣ ಸೌಧದಲ್ಲಿ ಕ್ಯಾಬಿನೆಟ್ ಮೀಟಿಂಗ್ ಮಾಡಬೇಕು ಎಂದು ಕರವೇ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು

ಬೆಳಗಾವಿಯ ಸುವರ್ಣ ಸೌಧದ ಎದುರು ವೀರರಾಣಿ ಕಿತ್ತೂರು ಚನ್ನಮ್ಮ,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವದರ ಜೊತೆಗೆ ಬೆಂಗಳೂರಿನ ವಿಧಾನಸಭೆಯ ಎದುರು ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಇದ್ದು ಅದೇ ರೀತಿಯಲ್ಲಿ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿದ ರೂವಾರಿ,ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೂರ್ತಿಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಪ್ರತಿಷ್ಠಾಪನೆ ಮಾಡಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.

ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗಮಟ್ಟಿ,ಬೆಳಗಾವಿಯ ಸುವರ್ಣಸೌಧಕ್ಕೆ ಜಿಲ್ಲಾ ಮಟ್ಟದ ಕಚೇರಿಗಳನ್ನು ಸ್ಥಳಾಂತರ ಮಾಡುವದು ಸರಿಯಲ್ಲ ಇಲ್ಲಿ ರಾಜ್ಯಮಟ್ಟದ ಕಚೇರಿಗಳನ್ನು ಮಾತ್ರ ಸ್ಥಳಾಂತರ ಮಾಡಬೇಕು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈ ಕುರಿತು ಕೂಡಲೇ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ,ಸುರೇಶ ಗವಣ್ಣವರ,ಗಣೇಶ ರೋಕಡೆ,ಬಾಳು ಜಡಗಿ,ಹೊಳೆಪ್ಪಗೋಳ,ಶಿವಾನಂದ ತಂಬಾಕಿ,ರಮೇಶ ಯರಗಣ್ಣವರ,ವಿನಾಯಕ ಬೋವಿ,ಕಿರಣ ಮಾಳಣ್ಣವರ,ಸತೀಶ ಗಾಡಿವಡ್ಡರ,ಮಹೇಶ ಶಿಗೇಹಳ್ಳಿ ,ಚೇತನ ಮಾಸ್ತಿಹೊಳಿ,ವಿನಾಯಕ ಹಟ್ಟಿಹೊಳಿ,ವಿನಾಯಕ ಬೋವಿ ಸೇರಿದಂತೆ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

Check Also

ಬೈಕ್ ಮೇಲೆ ಹೋಗುವಾಗ ಹಣಕಾಸಿನ ಜಗಳ ಕೊಲೆಯಲ್ಲಿ ಅಂತ್ಯ

ಯಮಕನಮರ್ಡಿ- ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಅಂಕಲಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ …

Leave a Reply

Your email address will not be published. Required fields are marked *