ಬೆಳಗಾವಿ- ಕುಂದಾನಗರಿ ಬೆಳಗಾವಿಯಲ್ಲಿ ತಡರಾತ್ರಿ ಅಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನಡೆದಿದೆ.
ಆಟೋ ಬೆಳಗಾವಿ ಬಸ್ ನಿಲ್ಧಾಣದಿಂದ ಅಲಾರವಾಡ್ ಕ್ರಾಸ್ ಗೆ ಹೊರಟಿತ್ತು ದಾರಿಮದ್ಯೆ ಪ್ರಯಾಣಿಕ ಮತ್ತು ಚಾಲಕನ ನಡುವೆ ವಾಗ್ವಾದ ನಡೆದಿದೆ.ಈ ಸಂಧರ್ಭದಲ್ಲಿ ಪ್ರಯಾಣಿಕ ಚಾಕುವಿನಿಂದ ಅಟೋ ಚಾಲಕನ ಕತ್ತು ಸೀಳಿದ್ದಾನೆ.ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಟೋ ಚಾಲಕ ಅದೇ ಪರಿಸ್ಥಿತಿಯಲ್ಲಿ ಬಸ್ ನಿಲ್ಧಾಣದವರೆಗೂ ಬಂದಿದ್ದಾನೆ. ನಂತರ ಸ್ಥಳೀಯರು ಆಟೋ ಚಾಲಕನಿಗೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು ಈಗ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಟೋ ಚಾಲಕನ ಪರಿಸ್ಥಿತಿ ಗಂಭೀರವಾಗಿದೆ.
ಬೆಳಗಾವಿ ಮಾರುತಿ ನಗರದ ಬಳಿಯ ಎಸ್‌ಸಿ ಮೋಟರ್ಸ್ ಬಳಿ ಈ ಘಟನೆ ನಡೆದಿದೆ.ಆಟೋ ಚಾಲಕ ರಿಯಾಜ್ ತಹಶಿಲ್ದಾರ್ (53) ಕೊಲೆಗೆ ಯತ್ನ ನಡೆದಿದೆ.ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ನಿವಾಸಿಯಾಗಿರುವ ರಿಯಾಜ್ ತಹಶಿಲ್ದಾರ್ ಹಲ್ಲೆಗೊಳಗಾದ ಆಟೋ ಚಾಲಕನಾಗಿದ್ದಾನೆ.
ಗಾಂಜಾ ಮತ್ತಿನಲ್ಲಿ ಚಾಕುವಿನಿಂದ ಕತ್ತು ಸೀಳಿ ಕೊಲೆಗೆ ಯತ್ನಿಸಲಾಗಿದೆ ಎಂದು ಆಟೋ ಚಾಲಕನ ಕುಟಬಸ್ಥರು ಆರೋಪ ಮಾಡಿದ್ದಾರೆ.ಆಟೋ ಚಾಲಕನ ಬಳಿಯಿದ್ದ ಹಣ ದೋಚಿದ ಆರೋಪ ಮಾಡಲಾಗಿದೆ.ಜೀವನ್ಮರಣ ಮಧ್ಯೆ ಹೋರಾಟ ನಡೆಸುತ್ತಿರುವ ಆಟೋ ಚಾಲಕ ರಿಯಾಜ್ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಾಡಿಗೆಗೆ ಆಟೋ ಚಲಾಯಿಸಿ ಜೀವನ ನಡೆಸುತ್ತಿದ್ದ ರಿಯಾಜ್ ನ ಮೇಲೆ ತಡರಾತ್ರಿ ಮಾರಣಾಂತಿಕ ಹಲ್ಲೆಯಾಗಿದೆ.ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ,ಮಾಳಮಾರುತಿ ಪೊಲೀಸ್ ಠಾಣೆ ಬಳಿ ಸಂಬಂಧಿಕರು, ಆಟೋ ಚಾಲಕರ ಜಮಾವಣೆಯಾಗಿದ್ದಾರೆಮಾಳಮಾರುತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಆರೋಪಿ ವಶಕ್ಕೆ
ಆಟೋ ಚಾಲಕನ ಮೇಲೆ ಹಲ್ಲೆ ಮಾಡಿರುವ ಆರೋಪಿಯನ್ನು ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೇವೆ ಎಂದು ಡಿಸಿಪಿ ರೋಹನ್ ಜಗದೀಶ್ ತಿಳಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ