ಬೆಳಗಾವಿ-ಮೀನು ಹಿಡಿಯಲು ಹೋದ ತಂದೆ ಹಾಗೂ ಇಬ್ಬರು ಮಕ್ಕಳು ನೀರು ಪಾಲಾದ ಘಟನೆ,ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಘಟಪ್ರಭಾ ನದಿಯಲ್ಲಿ ನಡೆದಿದೆ.
ಬೆನಕನಹೊಳಿ ಗ್ರಾಮದ ಲಕ್ಷ್ಮಣರಾಮ ಅಂಬಲಿ (49) ರಮೇಶ್ ಅಂಬಲಿ (14),ಯಲ್ಲಪ್ಪ ಅಂಬಲಿ (12) ಘಟಪ್ರಭಾ ನದಿಯಲ್ಲಿ ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.ಭಾನುವಾರ ಸಂಜೆ ನದಿಯಲ್ಲಿ ಬಲೆ ಹಾಕುವ ವೇಳೆ ಅವಘಡ ಸಂಭವಿಸಿದೆ.ಮೂವರಿಗೂ ಎಸ್‌ಡಿಆರ್‌ಎಫ್ ತಂಡದಿಂದ ಶೋಧಕಾರ್ಯ ನಡೆಯುತ್ತಿದೆ.ಸ್ಥಳಕ್ಕೆ ಯಕಮನಮರಡಿ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ