Breaking News

ಚಳಿಗಾಲದ ಅಧಿವೇಶನದ ದಿನಾಂಕ ನಿಗದಿಪಡಿಸಿ

ಬೆಳಗಾವಿ-ಉತ್ತರ ಕರ್ನಾಟಕದ ಶಕ್ತಿ ಕೇಂದ್ರ ಈ ಭಾಗದ ಅಭಿವೃದ್ಧಿಗೆ ದಿಕ್ಸೂಚಿಯಾಗಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ ಮೊದಲನೆಯ ವಾರದಿಂದ ಅಧಿವೇಶನ ಆರಂಭವಾಗಲಿದೆ ಎಂದು ವಿಧಾನಸಭಾಧ್ಯಕ್ಷರು ಮುನ್ಸೂಚನೆ ನೀಡಿದ್ದು ಸರ್ಕಾರ ಕೂಡಲೇ ಬೆಳಗಾವಿ ಅಧಿವೇಶನದ ದಿನಾಂಕ ನಿಗದಿಪಡಿಸಬೇಕೆಂದು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ದಿನಾಂಕವನ್ನು ಇತ್ತೀಚಿಕೆ ನಡೆದ ಸಚಿವ ಸಂಪುಟದ ಸಭೆಯಲ್ಲಿ ನಿರ್ಧಾರ ಮಾಡಬೇಕಿತ್ತು, ಆದ್ರೆ ಸುವರ್ಣಸೌಧದ ಬದಲಾಗಿ ಬೆಂಗಳೂರಿನಲ್ಲೇ ಅಧಿವೇಶನ ನಡೆಸುವ ಹುನ್ನಾರ ನಡೆದಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ.ಸರ್ಕಾರ ಯಾವುದೇ ಕಾರಣಕ್ಕೂ ಬೆಂಗಳೂರಿನಲ್ಲಿ ಅಧಿವೇಶನ ನಡೆಸದೇ ಬೆಳಗಾವಿಯಲ್ಲೇ ಅಧಿವೇಶನ ನಡೆಸಬೇಕು ತುರ್ತಾಗಿ ಸಚಿವ ಸಂಪುಟದ ಸಭೆ ನಡೆಸಿ ದಿನಾಂಕವನ್ನು ನಿಗದಿ ಮಾಡಬೇಕು ಎಂದು ಕರವೇ ಆಗ್ರಹಪಡಿಸಿದೆ.

ಬೆಳಗಾವಿ ಮಹಾನಗರದ ರಸ್ತೆಗಳು ಹಾಳಾಗಿದ್ದು ಅಧಿವೇಶನದ ಮೊದಲು ನಗರದ ರಸ್ತೆಗಳನ್ನು ದುರಸ್ತಿ ಮಾಡಬೇಕು, ನಗರದ ಸ್ವಚ್ಛತೆಯ ಬಗ್ಗೆ ಕ್ರಮ ಜರುಗಿಸಬೇಕು, ಬೆಳಗಾವಿ ಮಹಾನಗರದ ಅಭಿವೃದ್ಧಿಗೆ ಸರ್ಕಾರ ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಒತ್ತಾಯಿಸಿದ್ದಾರೆ.

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರು ಕಡ್ಡಾಯವಾಗಿ ಭಾಗವಹಿಸಿ ಪಕ್ಷಾತೀತವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಯ ಕುರಿತು ಧ್ವನಿ ಎತ್ತಬೇಕು ಈ ಬಾರಿಯ ಅಧಿವೇಶನ ಉತ್ತರ ಕರ್ನಾಟಕದ ಪಾಲಿಗೆ ವರದಾನ ಆಗಬೇಕು ಎಂದು ಕರವೇ ಮನವಿ ಮಾಡಿಕೊಂಡಿದೆ.

Check Also

ಮಂತ್ರಿಗಿರಿ ರೇಸ್ ನಲ್ಲಿ ಬೆಳಗಾವಿಯ ಜಾತ್ಯಾತೀತ ಕುಟುಂಬದ, ಶಾಸಕ!

ಬೆಳಗಾವಿ ಯಾರಿಗೆ ಸೇರಿದ್ದು ಎಂದು ವಿಚಾರಣೆ ಮಾಡಲು ಕೇಂದ್ರ ಸರ್ಕಾರಗಳು ರಚಿಸಿದ ಫಜಲ್ ಅಲಿ,ಆಯೋಗ,ಮಹಾಜನ್ ಆಯೋಗ ಬೆಳಗಾವಿಗೆ ಬಂದಾಗ ಎಲ್ಲ …

Leave a Reply

Your email address will not be published. Required fields are marked *