Breaking News

ಬೆಳಗಾವಿಯಲ್ಲಿ ಡಿ.9ರಿಂದ ಚಳಿಗಾಲ ಅಧಿವೇಶನ

ಬೆಳಗಾವಿ-ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದಾರೆ.ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವು ಡಿ.9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸರಕಾರ ನಿರ್ಧರಿಸಿದೆ.

ಈ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕ, ಸ್ಥಳ ನಿಗದಿ ಮಾಡಿ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗೆ ನೀಡಲಾಗಿತ್ತುಅದರಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಡಿ.9 ರಿಂದ 20ರವರೆಗೆ ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಕರೆಯುವಂತೆ ರಾಜ್ಯಪಾಲರಿಗೆ ಕಡತ ಕಳುಹಿಸಿಕೊಟ್ಟಿದ್ದರು. ಇದೀಗ ಕಡತಕ್ಕೆ ಗೆಹ್ಲೋಟ್ ಅವರು ಸಹಿ ಮಾಡಿದ್ದಾರೆನ್ನಲಾಗಿದ್ದು, ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಗೆ ಅಧಿವೇಶನ ಆರಂಭವಾಗುತ್ತಿದೆ.

Check Also

ನಿರಂತರ ಮಳೆ,ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಚಿವ ಸತೀಶ್‌ ಜಾರಕಿಹೊಳಿ ಮನವಿ ಬೆಳಗಾವಿ: ಭಾರತ ಹವಾಮಾನ ಇಲಾಖೆ ಆಗಸ್ಟ್ …

Leave a Reply

Your email address will not be published. Required fields are marked *