ಬೆಳಗಾವಿ- ಹಾಡು ಹಗಲೇ ಯುವಕನ ಬರ್ಬರ ಹತ್ಯೆ ಮಾಡಿದ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಸೋಹಿಲ್ ಅಹ್ಮದ್ ಕಿತ್ತೂರು(17) ಮೃತ ಯುವಕನಾಗಿದ್ದು ಮುರುಗೋಡು ಹೊರ ವಲಯದಲ್ಲಿ ಚಾಕುವಿನಿಂದ ಎಲ್ಲೆಂದರಲ್ಲಿ ಇರಿದು ಕೊಲೆ ಮಾಡಲಾಗಿದೆ.ಗ್ರಾಮದಲ್ಲಿ ಎಗ್ ರೈಸ್ ಅಂಗಡಿ ಇಟ್ಟುಕೊಂಡಿದ್ದ ಯುವಕನ ಕೊಲೆಯಾಗಿದೆ.
ಐವರು ಯುವಕರನಿಂದ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.ಈ ಹಿಂದೆ ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ.ಕೊಲೆ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳದಲ್ಲಿ ನೂರಾರು ಜನರ ಜಮಾವಣೆಯಾಗಿದ್ದಾರೆ. ಸ್ಥಳಕ್ಕೆ ಮುರಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮುಂದುವರೆಸಿದ್ದಾರೆ.