Breaking News

ಹಾಡು‌ ಹಗಲೇ ಯುವಕನ ಬರ್ಬರ ಹತ್ಯೆ.

ಬೆಳಗಾವಿ- ಹಾಡು‌ ಹಗಲೇ ಯುವಕನ ಬರ್ಬರ ಹತ್ಯೆ ಮಾಡಿದ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಸೋಹಿಲ್ ಅಹ್ಮದ್ ಕಿತ್ತೂರು(17) ಮೃತ ಯುವಕನಾಗಿದ್ದು ಮುರುಗೋಡು ಹೊರ ವಲಯದಲ್ಲಿ ಚಾಕುವಿನಿಂದ ಎಲ್ಲೆಂದರಲ್ಲಿ ಇರಿದು ಕೊಲೆ ಮಾಡಲಾಗಿದೆ.ಗ್ರಾಮದಲ್ಲಿ ಎಗ್ ರೈಸ್ ಅಂಗಡಿ ಇಟ್ಟುಕೊಂಡಿದ್ದ ಯುವಕನ ಕೊಲೆಯಾಗಿದೆ.

ಐವರು ಯುವಕರನಿಂದ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ.ಈ ಹಿಂದೆ ಯುವಕರಿಂದ ಮೃತನಿಗೆ ಕೊಲೆ ಬೆದರಿಕೆ ಬಂದಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ.ಕೊಲೆ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳದಲ್ಲಿ ನೂರಾರು ಜನರ ಜಮಾವಣೆಯಾಗಿದ್ದಾರೆ. ಸ್ಥಳಕ್ಕೆ ಮುರಗೋಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮುಂದುವರೆಸಿದ್ದಾರೆ.

Check Also

ವಿಧಾನಸಭೆಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟದ ಪ್ರತಿಧ್ವನಿ

ಬೆಳಗಾವಿ – ವಿಧಾನಸಭೆಯಲ್ಲಿ ಮೊದಲ ದಿನವೇ ಪಂಚಮಸಾಲಿ ಮೀಸಲಾತಿ ಹೋರಾಟ ಪ್ರತಿಧ್ವನಿಸಿತುವಿಧಾನಸಭೆಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದ ಬಳಿಕ ಸಭಾದ್ಯಕ್ಷರು …

Leave a Reply

Your email address will not be published. Required fields are marked *