Breaking News

ಕಳಸಾ ಬಂಡೂರಿ ನಾಲಾ ಯೋಜನೆಗೆ ಮರುಜೀವ,ಹೊಸ ಪ್ರಸ್ತಾವನೆ ಸಲ್ಲಿಸಲು ಕೇಂದ್ರದ ಸೂಚನೆ

ಹಠಮಾಡಿ,ಜಯ ಸಾಧಿಸಿದ ಸಾಹುಕಾರ್

ಬೆಳಗಾವಿ- ಕೋವೀಡ್ ಸಂಕಷ್ಟದ ನಡುವೆಯೂ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕರ್ನಾಟಕದಲ್ಲಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಜೀವದ ಹಂಗು ತೊರೆದು ಕೊರೋನಾ ಭೀತಿಯನ್ನು ಲೆಕ್ಕಿಸದೇ ಓಡಾಡುತ್ತಿದ್ದು ಅವರ ಅವಿರತ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಿದೆ

ಕಳಸಾ ಬಂಡೂರಿ ನಾಲಾ ಪ್ರಥಮ ಹಂತದ ಯೋಜನೆಗೆ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಹೊಸ ಪ್ರಸ್ತಾವಣೆ ಸಲ್ಲಿಸುವಂತೆ ಇಲಾಖೆ ರಾಜ್ಯ ಸಂಪನ್ಮೂಲ ಇಲಾಖೆಗೆ ಪತ್ರದ ಮುಖೇನ ಸೂಚನೆ ನೀಡಿರುವದು ಸಂತಸದ ಸಂಗತಿಯಾಗಿದೆ.

ರಮೇಶ್ ಜಾರಕಿಹೊಳಿ ಅವರು ರಾಜ್ಯದ ಜಲಸಂಪನ್ಮೂಲ ಸಚಿವರಾದ ತಕ್ಷಣ ದೇಶದಲ್ಲಿ ಕೊರೋನಾ ಮಹಾಮಾರಿಯ ಕಾಟ ಶುರುವಾಗಿತ್ತು,ಲಾಕ್ ಡೌನ್ ಕಾರಣದಿಂದಾಗಿ ರಸ್ತೆಯ ಮೂಲಕವೇ ದೇಹಲಿಗೆ ಹೋಗಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕಳಸಾ ಬಂಡೂರಿ ನಾಲೆಗಳ ಪ್ರಥಮ ಹಂತದ ಯೋಜನೆಗೆ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ನೀಡುವಂತೆ ಕೋರಿದ್ದರು

ರಾಜ್ಯ ಜಲಸಂಪನ್ಮೂಲ ಇಲಾಖೆಯ ಮನವಿಗೆ ತ್ವರಿತವಾಗಿ ಸ್ಪಂದಿಸಿರುವ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆ ,ಕಳಸಾ ಬಂಡೂರಿ ನಾಲಾ ಯೋಜನೆಯ ಕುರಿತು ಕರ್ನಾಟಕ ಮತ್ರು ಪಕ್ಕದ ರಾಜ್ಯಗಳ ನಡುವೆ ಡಿಸ್ ಪ್ಯುಟ್ ಇರುವ ಕಾರಣ ಯೋಜನೆಯ ಪ್ರಸ್ತಾವನೆಯನ್ನು 2003 ರಲ್ಲಿಯೇ ರಾಜ್ಯಕ್ಕೆ ಮರಳಿಸಲಾಗಿತ್ತು 2014 ರಲ್ಲಿ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತಂದಿದ್ದು ಅದರ ಪ್ರಕಾರ,ಹೊಸ ಪ್ರಸ್ತಾವಣೆ ಸಲ್ಲಿಸಿ ಅನುಮತಿ ಪಡೆಯುವಂತೆ,ರಾಜ್ಯದ ಜಲಸಂಪನ್ಮೂಲ ಇಲಾಖೆಗೆ ಪತ್ರ ಬಂದಿದೆ.

ರಮೇಶ್ ಜಾರಕಿಹೊಳಿ ಅವರು ಜಲಸಂಪನ್ಮೂಲ ಸಚಿವರಾದ ಬಳಿಕ ಕೊರೋನಾ ಸಂಕಷ್ಟದ ಮದ್ಯೆಯೂ ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸ ಮಾಡಿ ನೀರಾವರಿ ಯೋಜನೆಗಳ ಪ್ರಗತಿ ಪರಶೀಲನೆ ಮಾಡಿದ್ದಾರೆ ,ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ನೀರಾರಿ ಬಿಕ್ಕಟ್ಟು ಶಮನಕ್ಕಾಗಿ ಮುಂಬಯಿ ಗೆ ವಿಶೇಷ ನಿಯೋಗ ಕೊಂಡೊಯ್ದು ಬೆನ್ನಲ್ಲಿಯೇ ಕಳಸಾ ಬಂಡೂರಿ ಯೋಜನೆಗೂ ಕೇಂದ್ರದ ಪರಿಸರ ಮತ್ತು ಅರಣ್ಯ ಇಲಾಖೆ ಸ್ಪಂದಿಸಿದ್ದು ರಾಜ್ಯದ ಪಾಲಿಗೆ ಅದರಲ್ಲಿಯೂ ಉತ್ತರ ಕರ್ನಾಟಕದ ರೈತರ ಪಾಲಿಗೆ ಸಂತಸದ ಸುದ್ಧಿ ಹೊರಬಿದ್ದಿದೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *