ಬೆಳಗಾವಿ-ಇಲ್ಲಿನ ರಾಮತೀರ್ಥ ನಗರದಲ್ಲಿ ವ್ಯಕ್ತಿಯೋರ್ವನ ಭೀಕರ ಕೊಲೆಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಈ ಪ್ರಕರಣ ಸಂಬಂಧ ಪೊಲೀಸರು ಮೃತನ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ.
ಚಿಕ್ಕೋಡಿ ತಾಲೂಕಿನ ಅಮಿತ ರಾಯಬಾಗ ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಈತ ಪತ್ನಿ, ಇಬ್ಬರು ಮಕ್ಕಳೊಂದಿಗೆ ರಾಮತೀರ್ಥ ನಗರದಲ್ಲಿ ವಾಸವಾಗಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಕತ್ತು ಹಿಸುಕು ಕೊಲೆ ಮಾಡಲಾಗಿದೆ. ಪತಿ ನಿತ್ಯ ಮದ್ಯ ಕುಡಿದು ಗಲಾಟೆ ಮಾಡುತ್ತಿದ್ದರಿಂದ ಪತ್ನಿಯೇ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.