ಬೆಳಗಾವಿ- ಗ್ಯಾರಂಟಿ ಯೋಜನೆಗಳ ಹೊಡೆತಕ್ಕೆ ರಾಜ್ಯ ಸರ್ಕಾರದ ಖಜಾನೆ ಖಾಲಿ ಆಗಿದೆ ಎನ್ನುವದು ಎಲ್ಲರ ಊಹೆ ಆಗಿತ್ತು ಇಂತಹ ಖಾಲಿ ಖಾಲಿ ಖಯ್ಯಾಲಿಯ ನಡುವೆಯೂ ಬೆಳಗಾವಿ ಪಾಲಿಗೆ ಸಿದ್ರಾಮಯ್ಯ ಮಂಡಿಸಿದ ಬಜೆಟ್ ಜ್ವಾಲಿ ಜ್ವಾಲಿಯಾಗಿದೆ ಎನ್ನಬಹುದು.
ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಈ ಬಾರಿಯಾದರೂ ಬೆಳಗಾವಿ ಜಿಲ್ಲಾ ವಿಭಜನೆ ಮಾಡಬೇಕೆಂಬ ಬೇಡಿಕೆಗೆ ಸ್ಪಂದನೆ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದ್ದರೂ ಸಿಎಂ ಸಿದ್ದರಾಮಯ್ಯ ಗಡಿ ಜಿಲ್ಲೆ ಬೆಳಗಾವಿಗೆ ಹಲವು ಯೋಜನೆಗಳ ಕೊಡುಗೆ ನೀಡಿರುವುದು ಜಿಲ್ಲೆಯ ಜನತೆಗೆ ಸಮಾಧಾನ ತಂದಿದೆ. ಜಿಲ್ಲೆಗೆ ಸಿಕ್ಕಿರುವ ಯೋಜನೆಗಳೇನು? ಎಂಬುದರ ವಿವರ ಹೀಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿ ಪಡೆಯುವುದು.
ಅಥಣಿಯಲ್ಲಿ 50 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸ್ಥಾಪನೆ ಮಾಡಲು ಅನುಮೋದನೆ.
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ವತಿಯಿಂದ ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಹಾಗೂ ಖಾನಾಪುರ ತಾಲೂಕಿ ನಂದಗಡದಲ್ಲಿ ₹ 28 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳುವುದು.
ಬೆಳಗಾವಿಯಲ್ಲಿ ನವೋದ್ಯಮ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಗೊಳಿಸುವುದು.
ಕಿಯೋಕ್ಸ್ ವತಿಯಿಂದ ಬೆಳಗಾವಿಯಲ್ಲಿ ಪ್ಲಗ್ ಆ್ಯಂಡ್ ಪ್ಲೇ ಸೌಲಭ್ಯಗಳನ್ನೊಳಗೊಂಡ ಹೊಸ ಜಾಗತಿಕ ತಂತ್ರಜ್ಞಾನ ಕೇಂದ್ರ ಸ್ಥಾಪನೆ.
ಬೆಳಗಾವಿ ಜಿಲ್ಲೆಯ ನೀರಾವರಿ ಮತ್ತು ಜಲ ಸಂರಕ್ಷಣಾ ಯೋಜನೆಗಳಿಗೆ ₹ 600 ಕೋಟಿ ಅನುದಾನ ಕಾಯ್ದಿರಿಸಲಾಗಿದೆ.
ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಗೆ ₹ 1000 ಕೋಟಿ ಕಾಯ್ದಿರಿಸಲಾಗಿದೆ.
ಬೆಳಗಾವಿ ಮತ್ತು ಧಾರವಾಡ ನಡುವಿನ ಸಂಪರ್ಕವನ್ನು ಬಲಪಡಿಸಲು ಹೊಸ ಎಕ್ಸ್‌ಪ್ರೇಸ್ ಸೇತುವೆ ನಿರ್ಮಾಣಕ್ಕೆ ₹1200 ಕೋಟಿ ನಿಗದಿಪಡಿಸಲಾಗಿದೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸಲು ₹850 ಕೋಟಿ ನಿಗದಿಪಡಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಕೃಷಿ ತಾಂತ್ರಿಕ ಹಬ್ ಅನ್ನು ಸ್ಥಾಪಿಸಲು ₹ 500 ಕೋಟಿ ನಿಗದಿಪಡಿಸಲಾಗಿದೆ.
ಸವದತ್ತಿ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ ₹ 199 ಕೋಟಿ ಘೋಷಣೆ ಮಾಡಲಾಗಿದೆ.
ಸೇವಾದಳ ಸಂಸ್ಥಾಪಕ, ಸ್ವಾತಂತ್ರ್ಯ ಸೇನಾನಿ ಪದ್ಮಭೂಷಣ ಡಾ. ನಾ.ಸು. ಹರ್ಡಿಕರ ಅವರ ಸ್ಮಾರಕವನ್ನು ಘಟಪ್ರಭಾ ಆರೋಗ್ಯ ಧಾಮದಲ್ಲಿ ನಿರ್ಮಿಸಲು ₹ 2 ಕೋಟಿ ಅನುದಾನ ಕಾಯ್ದಿರಿಸಲಾಗಿದೆ.
ಡಿಸಿ ಕಚೇರಿ ಕಾಂಪ್ಲೆಕ್ಸ್ ನಿರ್ಮಾಣಕ್ಕೆ 55 ಕೋಟಿ ರೂ
ಬೆಳಗಾವಿ ನಗರದಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡವನ್ನು ನಿರ್ಮಾಣ ಮಾಡಲು ಬಜೆಟ್ ನಲ್ಲಿ 55 ಕೋಟಿ ರೂ ಅನುದಾನ ನೀಡಲಾಗಿದೆ.
ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು 5 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ.
ಪತ್ರಕರ್ತರಿಗೂ ಬಂಪರ್
ಮಾನ್ಯತೆ ಹೊಂದಿದೆ ಪತ್ರಕರ್ತರ ಕುಟುಂಬದವರಿಗೆ ಐದು ಲಕ್ಷ ರೂ ಗಳ ಆರೋಗ್ಯ ವಿಮೆ, ಜೊತೆಗೆ 60 ವರ್ಷ ವಯೋಮಿತಿ ಹೊಂದಿದ ಪತ್ರಕರ್ತರಿಗೆ ಪ್ರತಿ ತಿಂಗಳು ನೀಡುವ 12 ಸಾವಿರ ಮಾಸಾಶನ 15 ಸಾವರ ರೂ ಗೆ ಏರಿಕೆಯಾಗಿದೆ.