ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಯುವಕನ ಆತ್ಮಹತ್ಯೆ

ಬೆಳಗಾವಿ-70 ಸಾವಿರ ಬೆಲೆಯ,ದುಬಾರಿ ಐಫೋನ್ ತಂದಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇಷ್ಟೊಂದು ದುಬಾರಿ ಐಪೋನ್ ಯಾಕೆ ಎಂದು ತಂದೆ ಪ್ರಶ್ನಿಸಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬೆಳಗಾವಿಯ ವೈಭವ ನಗರದಲ್ಲಿ ಈ ಘಟನೆ ನಡೆದಿದೆ.ರಶೀದ್ ಶೇಖ್ 24 ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ.

70 ಸಾವಿರ ಬೆಲೆಯ ಐಪೊನ್ ತಂದಿದ್ದ ರಶೀದ್ ಶೇಖ್ ಈ ವಿಚಾರ ತಂದೆಯ ಗಮನಕ್ಕೆ ಬಂದಾಗ,ಇಷ್ಟೊಂದು ದುಬಾರಿ ಪೋನ್ ಬೇಕಿತ್ತಾ ಎಂದು ಪ್ರಶ್ನಿಸಿದ್ದ ತಂದೆ,ಮಗನಿಗೆ ಬುದ್ದಿವಾದ ಹೇಳಿದ್ದ,ಇದರಿಂದ ಮನನೊಂದು ಮಗ ರಶೀದ್ ಆತ್ಮಹತ್ಯೆಗೆ ಶರಣಾಗಿದ್ದಾನೆ.ಮನೆಯ ಬೆಡ್ ರೂಂ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *