ಬೆಳಗಾವಿ-ರಸ್ತೆ ಮೇಲೆ ಬರ್ತಿದ್ದ ಯುವಕನ ಕೊಚ್ಚಿ ಬರ್ಬರ ಹತ್ಯೆ ಮಾಡಿದ ಘಟನೆ,ಗೋಕಾಕ್ ನಗರದ ಹಿಲ್ ಗಾರ್ಡನ್ ರಸ್ತೆಯಲ್ಲಿ ನಡೆದಿದೆ.
ಪರಶುರಾಮ್ ಗೊಂದಳಿ(26) ಹತ್ಯೆಯಾದ ಯುವಕನಾಗಿದ್ದು ಹತ್ಯೆಯಾದ ಯುವಕ ಪರಶುರಾಮ
ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಗೊಂದಳಿ ಗಲ್ಲಿ ನಿವಾಸಿಯಾಗಿದ್ದಾನೆ.
ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು,ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.ಹಳೆ ವೈಷಮ್ಯ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಶವವನ್ನು ಸ್ಥಳೀಯ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ.ಗೋಕಾಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.