ಬೆಳಗಾವಿ- ಬೆಳಗಾವಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳವಡಿ ಮಲ್ಲಮ್ಮನ ಕ್ರಾಂತಿಯ ನೆಲ, ದೇಶದಲ್ಲಿ ಕ್ರಾಂತಿ ಆದಾಗ ಸಹಜವಾಗಿ ಕ್ರಾಂತಿಯ ನೆಲದ ಪಾತ್ರವೂ ಇರುತ್ತದೆ.ಈ ಹಿಂದೆ ಭಾರತ ಪಾಪಿ ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದರು ಇದರ ಕಾರ್ಯಾಚರಣೆಯ ರೂಪರೇಷೆ ಸಿದ್ಧವಾಗಿದ್ದು ನಮ್ಮ ಹೆಮ್ಮೆಯ ಕ್ರಾಂತಿಯ ನೆಲ ಬೆಳಗಾವಿಯಲ್ಲಿ ಈಗ ಪಾಕಿಸ್ತಾನದ ವಿರುದ್ಧ ಭಾರತ ಸಮರ ಸಾರಿದೆ.ಎಲ್ಲ ಭಾರತೀಯರು ಹೆಮ್ಮೆಪಡುವ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಶುರುವಾಗಿದೆ ಈ ಕಾರ್ಯಾಚರಣೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಕೊಣ್ಣೂರ ಗ್ರಾಮದ ಸೊಸೆ ಕೂಡಾ ಮುಖ್ಯ ಪಾತ್ರ ವಹಿಸುತ್ತಿರುವ ವಿಚಾರ ಬೆಳಗಾವಿ ಜಿಲ್ಲೆಯ ಜನ ಹೆಮ್ಮೆ ಪಡುವ ಸಂಗತಿಯಾಗಿದೆ.
ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಸೇನಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಭಾರತೀಯ ಸೇನೆ ಪಾಕಿಸ್ತಾನದಲ್ಲಿರುವ ಉಗ್ರರ ತಾಣಗಳನ್ನು ಮಟ್ಯಾಶ್ ಮಾಡಿದೆ.ಬಂಕರ್ ಗಳಲ್ಲಿ ಅಡಗಿದ್ದ ಪಾಪಿ ಉಗ್ರರರನ್ನು ನಿರ್ನಾಮ ಮಾಡಿದೆ. ಪಾಪಿಗಳಿಗೆ ತಕ್ಕ ಪಾಠ ಕಲಿಸಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಗ್ಗೆ ಎಳೆ ಎಳೆಯಾಗಿ ಮಾಹಿತಿಯನ್ನು ಮಾದ್ಯಮಗಳ ಮೂಲಕ ಬಿಚ್ಚಿಟ್ಟ ಕರ್ನಲ್ ಸೂಫಿಯಾ ಬೆಳಗಾವಿಯ ಸೊಸೆ ಎನ್ನುವದು ಹೆಮ್ಮೆಯ ವಿಚಾರವಾಗಿದೆ.
ಬೆಳಗಾವಿಯ ಸೊಸೆ ಈಗ ಭಾರತದ ಹೆಮ್ಮೆಯಾಗಿದ್ದಾರೆ.
ಆಪರೇಷನ್ ಸಿಂಧೂರ್ ಸೇನಾ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಖುರೇಷಿ,ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರಾಗಿದ್ದಾರೆ.ಪತಿಪತ್ನಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸೋಫೀಯಾ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದು,2015 ರಲ್ಲಿ ಮ್ಯಾರೇಜ್ ಆಗಿರೋ ತಾಜುದ್ದೀನ್ ಸೋಫೀಯಾ ಅವರದ್ದು ಪ್ರೇಮ ವಿವಾಹ
ಕರ್ನಲ್ ಸೋಫೀಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾದವರು
ಸದ್ಯ ಸೋಫೀಯಾ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದು,ಪತಿ ತಾಜುದ್ದೀನಿ ಬಾಗೇವಾಡಿ ಸಹ ಜಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಆಪರೇಷನ್ ಸಿಂಧೂರ್ ಜೈ ಹೋ……