Breaking News

ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ : ಇಬ್ಬರು ಸಹೋದರರು ವಿಷ ಸೇವಿಸಿ ಆತ್ಮಹತ್ಯೆ

ಸಂಕೇಶ್ವರ : ಮದುವೆ ಆಗದೆ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದ ಇಬ್ಬರು ಸಹೋದರರು ವಿಷಕಾರಿ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಕೋಣನಕೇರಿ ಗ್ರಾಮದಲ್ಲಿ ನಡೆದಿರುವದು ವರದಿಯಾಗಿದೆ.

ಈ ಘಟನೆಯಲ್ಲಿ ಸಂತೋಷ ರವೀಂದ್ರ ಗುಂಡೆ (55) ಹಾಗೂ ಅಣ್ಣಾಸಾಹೇಬ ರವೀಂದ್ರ ಗುಂಡೆ (50) ಈ ಇಬ್ಬರು ಸಹೋದರರು ಮೃತಪಟ್ಟ ದುರ್ಧೈವಿಗಳಾಗಿದ್ದಾರೆ.

ಈ ಇಬ್ಬರು ಸಹೋದರರಿಗೆ ಮದುವೆ ಆಗಿರಲಿಲ್ಲ ಎನ್ನುವ ಕಾರಣದಿಂದ ಸಾರಾಯಿ ಕುಡಿತದ ಚಟಕ್ಕೆ ಬಿದ್ದಿದ್ದರು. ಬಳಿಕ ಕುಡಿತದ ನಸೆಯಲ್ಲಿ ವಿಷಕಾರಿ ಪದಾರ್ಥ ಸೇವನೆ ಮಾಡಿದ್ದಾರೆ.ಕೂಡಲೆ ಇವರಿಬ್ಬರನ್ನು ನೆರೆಯ‌ ಮಹಾರಾಷ್ಟ್ರ ದ ಗಡಹಿಂಗ್ಲಜ್ ಪಟ್ಟಣದ ಆಸ್ಪತ್ರೆಗೆ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ.

ಈ ಕುರಿತು ಮೃತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂಕೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಈ ಕುರಿತು ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ನಾಳೆ ಬೆಳಗಾವಿಯಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮಕ್ಕೆ ಗಣ್ಯರ ದಂಡು

ಪತ್ರಿಕಾ ದಿನಾಚರಣೆ ನಾಳೆ; ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಬೆಳಗಾವಿ: ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ವತಿಯಿಂದ ಪತ್ರಿಕಾ …

Leave a Reply

Your email address will not be published. Required fields are marked *