ಬೆಳಗಾವಿ-ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ,ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಳಗಾವಿ ಮಹಾನಗರದಲ್ಲಿ ಒಂದು ತಿಂಗಳ ಅವಧಿಯಲ್ಲಿ ಸಾಮೂಹಿಕ ಅತ್ಯಾಚಾರದ ಎರಡನೇ ಪ್ರಕರಣ ದಾಖಲಾಗಿದೆ.ಆರು ಜನ ಸೇರಿಕೊಂಡು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಬೆಳಗಾವಿ ತಾಲೂಕಿನ ಹೊರವಲಯದಲ್ಲಿರುವ ಗುಡ್ಡಗಾಡಿನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಲಾಗಿದೆ,ಬಳಿಕ ಲೈಂಗಿಕ ದೌರ್ಜನ್ಯದ ದೃಶ್ಯ ಸೆರೆಹಿಡಿದು ಬ್ಲ್ಯಾಕ್ ಮೇಲೆ ಮಾಡಿ ನಿರಂತರ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ.
ವಿಷಯ ಬಾಲಕಿ ಪೋಷಕರಿಗೆ ಗೊತ್ತಾಗುತ್ತಿದ್ದಂತೆ ಪೊಲೀಸರಿಗೆ ದೂರು ನೀಡಲಾಗಿದೆ.
ಪೋಷಕರ ದೂರಿನ ಅನ್ವಯ ಓರ್ವ ಆರೋಪಿ ಬಂಧಿಸಿ ವಿಚಾರಣೆ ನಡೆಸಲಾಗಿದೆ.ಉಳಿದ ಆರೋಪಿಗಳ ಪತ್ತೆಗೆ ಪೋಲೀಸರು ಜಾಲ ಬೀಸಿದ್ದಾರೆ.
ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ