ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾಸ್ಕಿ ಯೋಜನೆಯಡಿ 100 ಕೋಟಿ, ಪ್ರಸಾದ ಯೋಜನೆಯಡಿ 18 ಕೋಟಿ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ನಿಧಿಯಿಂದ 97 ಕೋಟಿ ಪ್ರವಾಸೋದ್ಯಮ ಇಲಾಖೆಯ 15 ಕೋಟಿ ಸೇರಿದಂತೆ 215.37 ಕೋಟಿ ರೂ.ಗಳ ಮೊತ್ತದಲ್ಲಿ ಕೆಟಿಟಿಪಿ ಕಾಯ್ದೆಯಡಿ ಅನುಷ್ಠಾನ ಗೊಳಿಸಲು ಡಿಪಿಎಆರ್ ಗೆ ಸರ್ಕಾರದ ಅನುಮೋದನೆ ನೀಡಲು ಪ್ರವಾಸೋದ್ಯಮ ಇಲಾಖೆಯ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಜಿಲ್ಲಾಧಿಕಾರಿಗಳನ್ನು ಅನುಷ್ಠಾನ ಅಧಿಕಾರಿಯನ್ನಾಗಿ ನೇಮಿಸಲು ಹಾಗೂ ಯೋಜನೆ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಬೆಳಗಾವಿ ಜಿಲ್ಲೆ, ಸವದತ್ತಿ ತಾಲ್ಲೂಕಿನಲ್ಲಿ ಅಸ್ತಿತ್ವದಲ್ಲಿರುವ ಯರಗಟ್ಟಿ ಏತನೀರಾವರಿ ಯೋಜನೆಯ ನವೀಕರಣ ಕಾಮಗಾರಿಗೆ 25 ಕೋಟಿ ರೂಗಳಲ್ಲಿ ಕೈಗೊಳ್ಳಲು ಹಾಗೂ ಇದೇ ತಾಲ್ಲೂಕಿನಲ್ಲಿ ರೇಣುಕಾ ಏತ ನೀರಾವರಿಯ ನವೀಕರಣ ಕಾಮಗಾರಿಗೆ 20 ಕೋಟಿ ರೂಗಳಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.