ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಜಿಲ್ಲೆಯ ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಬೆಳಗಾವಿ ಜಿಲ್ಲಾಧಿಕಾರಿ ಮಹ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
ಸೋಮಾವಾರ ಮತ್ತು ಮಂಗಳವಾರ ಕೆಲವು ತಾಲ್ಲೂಕುಗಳ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು ಇಂದು ಮಂಗಳವಾರವೂ ಅನಾಹುತ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ ಜಿಲ್ಲೆ ಎಲ್ಲ ತಾಲ್ಲೂಕುಗಳ ಶಾಲೆಗಳಿಗೆ ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಬೆಳಗಾವಿ ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ನಿರಂತರವಾಗಿ ವಿಪರೀತ ಮಳೆ ಸುರಿಯುತ್ತಿದೆ ಜಿಲ್ಲೆಯ ಎಲ್ಲ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ.ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು ಕೃಷ್ಣಾ ತೀರದಲ್ಲಿ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ.