ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರ ಬೆಳಿಗ್ಗೆ ನಗರದ ನರಗುಂದಕರ ಭಾವೆ ಚೌಕದಲ್ಲಿರುವ ಸಾರ್ವಜನಿಕ ಗಣೇಶ ಉತ್ಸವ ಮಂಡಳದವರು ಪ್ರತಿಷ್ಠಾಪಿಸಿದ ಗಣೇಶನ ದರ್ಶನ ಪಡೆದರು
ಜಿಲ್ಲಾಧಿಕಾರಿ ಜಿಯಾವುಲ್ಲಾ ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಇತರ ಅಧಿಕಾರಿಗಳು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು
ಶ್ರೀ ಗಣೇಶನ ದರ್ಶನ ಪಡೆದು ಮಾತನಾಡಿದ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಮಹಾರಾಷ್ಟ್ರದ ಪೂನಾ ಹೊರತುಪಡಿಸಿದರೆ ಬೆಳಗಾವಿಯಲ್ಲಿ ಅತ್ಯಂತ ವಿಶಿಷ್ಟವಾಗಿ ಅದ್ಧೂರಿಯಿಂದ ಗಣೇಶ ಉತ್ಸವವನ್ನು ಆಚರಿಸಲಾಗುತ್ತದೆ ಲೋಕಮಾನ್ಯ ಬಾಲಗಂಗಾಧರ ತಿಲಕ ಅವರು ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಉತ್ಸವ ಮಂಡಳಿಗೆ ಶತಮಾನೋತ್ಸವ ಮುಗಿದು ಇಂದಿಗೂ ಲೋಕಮಾನ್ಯರ ಪ್ರೇರಣೆ ಮತ್ತು ಸ್ಪೂರ್ತಿ ಬೆಳಗಾವಿಯಲ್ಲಿ ಜೀವಂತವಾಗಿದೆ ಎಂದರು
ಬೆಳಗಾವಿಯ ಗಣೇಶ ವಿಸರ್ಜನೆಯ ಮೆರವಣಿಗೆ ಅತ್ಯಂತ ಅದ್ಧೂರಿಯಾಗಿ ನಡೆಯುತ್ತದೆ ಈ ಮೆರವಣಿಗೆಯಲ್ಲಿ ಭಾರತೀಯ ಸಂಸ್ಕೃತಿಯ ಅನಾವರಣ ವಾಗುತ್ತದೆ ಎಲ್ಲರು ಶಾಂತಿಯಿಂದ ಗಣೇಶನಿಗೆ ವಿದಾಯ ಹೇಳಬೇಕು ನಗರದಲ್ಲಿ ಶಾಂತಿ ಕಾಪಾಡಬೇಕು ಎಂದು ರಮೇಶ ಜಾರಕಿಹೊಳಿ ಮನವಿ ಮಾಡಿಕೊಂಡರು
ಇದೇ ಸಂಧರ್ಭದಲ್ಲಿ ನೂತನವಾಗಿ ಸಹಕಾರ ಸಚಿವರಾದ ರಮೇಶ ಜಾರಕಿಹೊಳಿ ಅವರಿಗೆ ಡಿಸಿ ಜಿಯಾವುಲ್ಲಾ ಅವರು ಜಿಲ್ಲಾಡಳಿತದಿಂದ ಸತ್ಕರಿಸಿದರು ನಗರ ಪೋಲೀಸ್ ಆಯುಕ್ತ ಕೃಷ್ಣ ಭಟ್ ವಿಕಾಸ ಕಲಘಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು
Check Also
ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??
ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …