Breaking News

ಮೋಟಾರ್ ಟ್ಯಾಕ್ಸ್ ಇಳದೈತಿ,ಮಂತ್ರಿಗಳ ಮೆಸ್ಸೇಜ್ ಬಂದೈತಿ…..!

ಬೆಳಗಾವಿ-ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮ 1957 ( ಕರ್ನಾಟಕ ಕಾಯ್ದೆ 35/1957) ಕಲಂ 16(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಮೋಟಾರು ವಾಹನಗಳ ಅಧಿನಿಯಮ 1957ರ ಷೆಡ್ಯೂಲ್ (ಎ) ಐಟಂ ಸಂಖ್ಯೆ: 5(ಎ)(iii) ರಂತೆ ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿರುವ ರೂ. 900/- ಗಳ ಮೋಟಾರು ವಾಹನ ತೆರಿಗೆಯನ್ನು ರೂ. 700/- ಗಳಿಗೆ ಇಳಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ  ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

ಮೋಟಾರು ವಾಹನಗಳ ತೆರಿಗೆಯನ್ನು ಇಳಿಸಬೇಕೆಂದು ಹಲವಾರು ವಾಹನ ಮಾಲೀಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶ್ರೀ ಸವದಿ ಅವರು ತಿಳಿಸಿದ್ದಾರೆ.

*-From Office of the Hon’ble Deputy Chief Minister, Transport Department*

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *