Breaking News

ಬೆಳಗಾವಿಯಲ್ಲಿ ಮಹಿಳಾ ಕಾಂಗ್ರೆಸ್ ನಿಂದ ಮೌನ ಪ್ರತಿಭಟನೆ

ಬೆಳಗಾವಿ
ಉತ್ತರ ಪ್ರದೇಶದ ಬಲರಾಮಪುರ ಜಿಲ್ಲೆಯ ಹತ್ರಾಸ್‌ನಲ್ಲಿ ನಡೆದ ಘಟನೆಯಿಂದ ಮಹಿಳೆಯರಿಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ನ ಸರಕಾರದಲ್ಲಿ ಮಹಿಳೆಯರು ಭಯ ಭೀತರಾಗಿದ್ದಾರೆ. ಅವರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ರವಾನಿಸಿದರು.

ಬೆಳಗಾವಿಯ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ಮಾಡಿದ ಮಹಿಳಾ ಕಾಂಗ್ರೆಸ್,
ಉತ್ತರ ಪ್ರದೇಶದ ಮನಿಶಾ ವಾಲ್ಮೀಕಿ 19 ವರ್ಷದ ಯುವತಿಯನ್ನು ನಾಲ್ಕು ಜನ ಪುಂಡರು ಸೇರಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿ ನಾಲಿಗೆಯನ್ನು ಕತ್ತರಿಸಿ ಬೆನ್ನು ಮೂಳೆ ಮುರಿದು ದಯನಿಯ ಪರಿಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಹದಿ ಹರೆಯದ ಯುವತಿಯ ಶವವನ್ನು ಪೊಲೀಸರು ಮಧ್ಯರಾತ್ರಿ 2.30ರ ಸುಮಾರಿಗೆ ಶವನ್ನು ಸುಟ್ಟು ಹಾಕಿದ್ದಾರೆ. ಯುವತಿ ಶವ ಪರೀಕ್ಷೆ ಮಾಡದೆ, ಅವಳ ತಂದೆ ತಾಯಿಯಂದರಿಗೆ ಯುವತಿ ಮುಖವನ್ನೆ ತೋರಿಸದೆ ಶವದ ವಿಧಿ ವಿಧಾನ ಪೂರೈಸಲು ಅವಕಾಶ ಕೊಡದೆ ಏಕಪಕ್ಷಿಯವಾಗಿ ಸುಟ್ಟು ಹಾಕಿದ್ದಕ್ಕೆ ಮನವಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚಿಗೆ ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಕೇಂದ್ರ ಬಿಜೆಪಿ ಹಾಗೂ ಉತ್ತರ ಪ್ರದೇಶದ ಸರಕಾರ ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರೀಯಾಂಕಾ ಗಾಂಧಿ ಅವರು ಸಂತ್ರಸ್ಥರ ಕುಟುಂಬಸ್ಥರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳು ಹೋದಾಗ ಅವರನ್ನು ತಡೆದಿದ್ದಲ್ಲದೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥನ್ ಅವರು ಕೂಡಲೇ ರಾಜೀನಾಮೆ ನೀಡಿ ತಮ್ಮ ಗೌರವನ್ನು ಉಳಿಸಿಕೊಳ್ಳಬೇಕು. ಮತ್ತು ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಬೆಳಗಾವಿ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜಯಶ್ರೀ ಮಾಳಗಿ, ಪರಶುರಾಮ ಒಗ್ಗಣ್ಣವರ, ಆಸೀಫ್ ಮುಜಾವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *