ಬೆಳಗಾವಿ
ರಾಜ್ಯದಲ್ಲಿರುವ ವಿವಿಯಿಂದ ಪರೀಕ್ಷೆ ನಡೆಸುವುದರ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಸರಕಾರ ಮತ್ತು ವಿವಿಯ ನಡುವೆ ಸಮನ್ವಯತೆ ಕೊರತೆ ಇದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಆಗ್ರಹಿಸಿ ಸೋಮವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೆಲ ವಿಶ್ವವಿದ್ಯಾಲಯಗಳು ಪಠ್ಯಕ್ರಮವನ್ನು ಬದಲಾವಣೆ ಮಾಡಿದ್ದಾರೆ. ಅವು ಇಲ್ಲಿಯವರೆಗೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳ ಕೈಗೆ ಸೇರಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಹಿಂದಿನ ಸೆಮಿಸ್ಟರ್ ಅಧ್ಯಯನ ಮಾಡಬೇಕೋ ಅಥವಾ ಈಗೀನ ಸಮಿಸ್ಟರ್ ಅಧ್ಯಯನ ಮಾಡಬೇಕೋ ಎನ್ನುವ ಗೊಂದಲದಲ್ಲಿದ್ದಾರೆ. ಇದನ್ನು ಸರಕಾರ ಸ್ಪಷ್ಟಪಡಿಸಬೇಕೆಂದು ಆಗ್ರಹಿಸಿದರು.
ಇಲ್ಲಿಯವರೆಗೂ ವಿಶ್ವವಿದ್ಯಾಲಯಗಳಿಂದ ಸ್ಪಷ್ಟವಾಗಿ ವಿದ್ಯಾರ್ಥಿಗಳಿಗೆ ಹೇಳುತ್ತಿಲ್ಲ. ಯಾವ ರೀತಿ ಪರೀಕ್ಷೆ ನಡೆಸುತ್ತಾರೆ ಎನ್ನುವುದು ವಿವಿಯಲ್ಲಿಯೇ ಗೊಂದಲ ಇದೆ. ಮುಂಬರು ದಿನಗಳಲ್ಲಿ ಎಲ್ಲ ವಿವಿಗಳು ಪರೀಕ್ಷೆ ಯಾವ ಮಾನದಂಡದ ಮೇಲೆ ನಡೆಸುತ್ತಾರೆ ಎನ್ನುವುದನ್ನು ಸ್ಪಷ್ಟ ಪಡಿಬೇಕೆಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ವಿವಿ ಗೂಗಲ್ ಮೂಲಕ ಸರ್ವೆ ನಡೆಸಿ ಬಗೆ ಹರಿಸುವ ಪ್ರಯತ್ನ ಮಾಡಬೇಕು. ವಿವಿಯ ಪರೀಕ್ಷೆ ನಡೆಸುವ ಬಗ್ಗೆ ಎಲ್ಲ ಪ್ರಾಚಾರ್ಯರಿಂದ ಸಲಹೆ ಪಡೆಬೇಕು. ವಿವಿಯಿಂದ ಒಂದು ಅಕಾಡ್ಯಾಮಿಕ್ ಕ್ಯಾಲೆಂಡರ್ ಬಿಡುಗಡೆ ಮಾಡುವ ವರೆಗೂ ವಿದ್ಯಾರ್ಥಿ ಹಾಗೂ ಶಿಕ್ಷಕರ ಮೇಲೆ ಒತ್ತಡ ಹಾಕಬಾರದು.
ಕೋವಿಡ್-೧೯ ಸೋಂಕಿರುವುದರಿoದ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ, ಸದ್ಯ ಆನ್‌ಲೈನ್ ಕ್ಲಾಸ್ ನಡೆಸುತ್ತಿರುವುದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆಯಾಗುತ್ತಿದೆ. ಆನ್ ಕ್ಲಾಸ್ ತೆಗೆದುಕೊಳ್ಳುವುದನ್ನು ಮತ್ತೇ ಕಾಲೇಜು ಆರಂಭವಾದ ಮೇಲೆ ಇನ್ನೊಮ್ಮೆ ಪಾಠ ಮಾಡಬೇಕೆಂದು ಆಗ್ರಹಿಸಿದರು.
ರೋಹಿತ ಉಮನಾಬಾದಿಮಠ, ಕಿರಣ ದುಕಾನದಾರ, ಸಂದೀಪ ದೇಶಪಾಂಡೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Check Also
ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ
ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …