Breaking News

ಲಂಚ ಪ್ರತಿಬಂಧಕ ಕಾಯ್ದೆ,ಕಾರ್ಯಾಗಾರ,ಆನ್ ಲೈನ್ ಉಪನ್ಯಾಸ

ಕಳಗಾವಿ, -: ಭ್ರಷ್ಟಾಚಾರ ನಿಗ್ರಹ ದಳ ಉತ್ತರ ವಲಯ, ಬೆಳಗಾವಿ ವತಿಯಿಂದ ಲಂಚ ಪ್ರತಿಬಂಧಕ ಕಾಯ್ದೆ-೧೯೮೮ (ತಿದ್ದುಪಡಿ-೨೦೧೮) ನೇದ್ದಕ್ಕೆ ಸಂಬಂಧಿಸಿದಂತೆ ಮೂರು ದಿನಗಳ ಕಾರ್ಯಾಗಾರ ಸುವರ್ಣ ವಿಧಾನಸೌಧದಲ್ಲಿ ಆರಂಭಗೊಂಡಿದೆ.

ಬೆಂಗಳೂರಿನ ಎಸಿಬಿ ಕೇಂದ್ರ ಕಚೇರಿಯ ಐಜಿಪಿ ಎಂ. ಚಂದ್ರಶೇಖರ ಅವರು ಸೋಮವಾರ (ಅ.12) ಕಾರ್ಯಾಗಾರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು.

ಬೆಳಗಾವಿಯ ೪ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯ ಎನ್. ವ್ಹಿ., ರಾಜ್ಯ ಮಾಹಿತಿ ಆಯೋಗದ ಬೆಳಗಾವಿ ಪೀಠದ ಆಯುಕ್ತರಾದ ಗೀತಾ ಬಿ.ವಿ., ಧಾರವಾಡದ ರಾಜ್ಯ ಉಚ್ಛ ನ್ಯಾಯಾಲಯದ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಮಲ್ಲಿಕಾರ್ಜುನ ಹಿರೇಮಠ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತದನಂತರ ಸದರ ಕಾರ್ಯಾಗಾರವನ್ನು ಉದ್ದೇಶಿಸಿ ಮಲ್ಲಿಕಾರ್ಜುನ ಹಿರೇಮಠ, ವಿಶೇಷ ಸಾರ್ವಜನಿಕ ಅಭಿಯೋಜಕರು, ರಾಜ್ಯ ಉಚ್ಛ ನ್ಯಾಯಾಲಯ, ಧಾರವಾಡ, ಶಂಕರ ಹೆಗಡೆ, ಹಿರಿಯ ವಕೀಲರು, ಹುಬ್ಬಳ್ಳಿ ಹಾಗೂ ಮಂಜುಳಾ ಇಟ್ಟಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಲೋಕಾಯುಕ್ತ ವಿಶೇಷ ನ್ಯಾಯಾಲಯ, ಬೆಂಗಳೂರು ಸಿಟಿ (ವಿಡಿಯೋ ಕಾನ್ಪರನ್ಸ್ ಮೂಲಕ ಭಾಗವಹಿಸಿ) ರವರು ಭ್ರಷ್ಟಾಚಾರ ಪ್ರಕರಣಗಳ ತನಿಖೆಯ ಬಗ್ಗೆ ಉಪನ್ಯಾಸ ನೀಡಿರುತ್ತಾರೆ.

ಈ ಕಾರ್ಯಾಗಾರದಲ್ಲಿ ಭ್ರಷ್ಟಾಚಾರ ನಿಗ್ರಹದ ದಳದ ಉತ್ತರ ವಲಯ, ಪೂರ್ವ ವಲಯ, ಪಶ್ಚಿಮ ವಲಯ, ಈಶಾನ್ಯ ವಲಯ, ಬಳ್ಳಾರಿ ವಲಯದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಹೆಚ್‌ಸಿ/ಪಿಸಿ ದರ್ಜೆಯ ೨೦೦ ಜನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಅಲ್ಲದೇ ಸದರಿ ಕಾರ್ಯಾಗಾರದಲ್ಲಿ ವಿಡಿಯೋ ಕಾನ್ಪರನ್ಸ್ ಮೂಲಕ ಕರ್ನಾಟಕ ರಾಜ್ಯದ ಎಲ್ಲ ಭ್ರಷ್ಟಾಚಾರ ನಿಗ್ರಹದ ದಳ ವಲಯಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಜನರು ಭಾಗವಹಿಸಿರುತ್ತಾರೆ.

ಸದರಿ ಕಾರ್ಯಾಕ್ರಮವು ಶ್ರೀ ಬಿ.ಎಸ್.ನೇಮಗೌಡರ, ಪೊಲೀಸ್ ಅಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಉತ್ತರ ವಲಯ, ಬೆಳಗಾವಿ ರವರ ನೇತೃತ್ವದಲ್ಲಿ ಜರುಗಿದ್ದು, ಸದರಿ ಕಾರ್ಯಾಗಾರವು ದಿನಾಂಕ: ೧೪.೧೦.೨೦೨೦ ರಂದು ಮುಕ್ತಾಯಗೊಳ್ಳಲಿದೆ.
****

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *