ಬೆಳಗಾವಿ: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಯ ಆಯ್ಕೆಗಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಅವರು ಸಮಿತಿ ರಚನೆ ಮಾಡಿದ್ದಾರೆ.
ಸಮಿತಿ ಅಧ್ಯಕ್ಷರಾಗಿ ಶಾಸಕ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಸಂಯೋಜಕರಾಗಿ ಹಾಗೂ ಸದಸ್ಯರಾದ ಎಲ್.ಹನುಮಂತಯ್ಯ, ಹೆಚ್.ಎಂ.ರೇವಣ್ಣ, ವೀರಕುಮಾರ್ ಎ ಪಾಟೀಲ್, ಅಜಯ್ ಕುಮಾರ್ ಸರ್ ನಾಯಕ್, ಅನಿಲ್ ಲಾಡ್, ಜಿ.ಎಸ್.ಪಾಟೀಲ್, ಬಸವರಾಜ್ ಶಿವಣ್ಣನವರ್, ಶ್ರೀನಿವಾಸ್ ವಿ.ಮಾನೆ, ನಾಗರಾಜ್ ಚೆಬ್ಬಿ ಅವರನ್ನು ಆಯ್ಕೆ ಮಾಡಿದ್ದು, ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಆಕಾಂಕ್ಷಿಗಳ ಪಟ್ಟಿಯನ್ನು ತಯಾರಿಸಿ ಕೆಪಿಸಿಸಿಗೆ ಕೂಡಲೇ ಸಲ್ಲಿಸಬೇಕೆಂದು ಡಿ.ಕೆ. ಶಿವುಕುಮಾರ್ ಕೋರಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ