ಭಾರತೀಯ ಜನತಾ ಪಾರ್ಟಿಯ ಬೆಳಗಾವಿ ಜಿಲ್ಲಾ ಕಚೇರಿ ನಿರ್ಮಾಣಕ್ಕಾಗಿ 30 ಗುಂಟೆ ಜಾಗವನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ನೀಡಲು ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಲಸಂಪನ್ಮೂಲ ಇಲಾಖೆಯ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸತತ ಪ್ರಯತ್ನದ ಫಲವಾಗಿ ನಗರಾಭಿವೃದ್ಧಿ ಇಲಾಖೆಯ ಪ್ರಸ್ತಾಪವನ್ನು ಸಚಿವ ಸಂಪುಟ ಒಪ್ಪಿ ಅನುಮೋದನೆ ನೀಡಿದೆ.
ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯ ಸ್ವಂತ ಕಟ್ಟಡ ಇರಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸೂಚನೆಯಂತೆ ಸಚಿವ ಸಂಪುಟದಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಚಿವ ರಮೇಶ್ ಜಾರಕಿಹೊಳಿ, ಮುಖ್ಯಮಂತ್ರಿಗಳು ಮತ್ತು ಇತರ ಸಚಿವರೊಂದಿಗೆ ಚರ್ಚಿಸಿ ಈ 30 ಗುಂಟೆ ಜಾಗವನ್ನು ಬಿಜೆಪಿ ಕಟ್ಟಡ ನಿರ್ಮಾಣಕ್ಕೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.