ಬೆಳಗಾವಿ- ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬು ಬೆಂಕಿಗಾಹುತಿಯಾದ ಘಟನೆ ಬೈಲಹೊಂಗಲ ತಾಲ್ಲೂಕಿನ ತಿಗಡಿ ಕ್ರಾಸ್ ಬಳಿ ಸಂಭವಿಸಿದೆ.
ವಿದ್ಯುತ್ ತಂತಿ ಹರಿದು ಬಿದ್ದು 8 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಭಸ್ಮವಾಗಿದೆ. ಕಟಾವಿಗೆ ಬಂದಿದ್ದ ಎಂಟು ಎಕರೆ ಕಬ್ಬು ಬೆಂಕಿಗಾಹುತಿಯಾಗಿದ್ದು, ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದ ರೈತ ಸಂಗಪ್ಪ ಕಾದ್ರೊಳ್ಳಿಗೆ ಸೇರಿದ ಜಮೀನಿನಲ್ಲಿ ಬೆಂಕಿಯ ಅವಘಡ ಸಂಭವಿಸಿದೆ. ಗದ್ದೆ ಮೇಲೆ ಹಾಯ್ದು ಹೋಗಿರುವ ವಿದ್ಯುತ್ ತಂತಿ ಹರಿದು ಬಿದ್ದು ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಇಡೀ ಜಮೀನಿಗೆ ಆವರಿಸಿದ ಬೆಂಕಿ, ಕಬ್ಬಿನ ಬೆಳೆಯನ್ನು ಸುಟ್ಟು ಭಸ್ಮಮಾಡಿದೆ.
ಬೆಂಕಿ ನಂದಿಸಲು ರೈತ ಕುಟುಂಬ,ಹಾಗೂ ಸ್ಥಳೀಯರು ಹರಸಾಹಸ ಪಟ್ಟರೂ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ