Breaking News

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ,ಓಪಿಡಿ ಶುರುವಾಯ್ತು….

ಬೆಳಗಾವಿ,-ಇದುವರೆಗೆ ಕೋವಿಡ್-೧೯ ನಿಗದಿತ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-೧೯ ಸೇರಿದಂತೆ ಮೊದಲಿನಂತೆ ಓಪಿಡಿ ಹಾಗೂ ಇತರೆ ಎಲ್ಲ ಆರೋಗ್ಯ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್-೧೯ ವ್ಯಾಪಕವಾಗಿ ಹರಡುತ್ತಿರುವ ವೇಳೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲಾ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಘೋಷಿಸಲಾಗಿತ್ತು.

ಇದೀಗ ಜಿಲ್ಲೆಯಲ್ಲಿ ಕೋವಿಡ್-೧೯ ಪ್ರಕರಣಗಳಲ್ಲಿ ಗಣನೀಯ ಇಳಿಮುಖವಾಗಿರುವುದರಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಹೊರ ರೋಗಿ ವಿಭಾಗ(ಓಪಿಡಿ) ಸೇರಿದಂತೆ ಎಲ್ಲ ಬಗೆಯ ವೈದ್ಯಕೀಯ ಸೇವೆಗಳನ್ನು ಮಂಗಳವಾರ(ನ.17) ದಿಂದ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಆಸ್ಪತ್ರೆಯ ಒಂದು ವಿಭಾಗವನ್ನು ಕೋವಿಡ್-೧೯ ಚಿಕಿತ್ಸೆಗೆ ಮೀಸಲಿಟ್ಟು, ಉಳಿದ ವಿಭಾಗಗಳಲ್ಲಿ ಮೊದಲಿನಂತೆ ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ. ಸಾರ್ವಜನಿಕರು ಆಸ್ಪತ್ರೆಯ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
***

Check Also

ಜ್ಞಾನೇಶ್ವರ ಮುನಿ ಮಹಾರಾಜರು (86) ವಿಧಿವಶ

ಬೆಳಗಾವಿ -ಯಮ ಸಲ್ಲೇಖನ ವೃತ್ತದ ಮೂಲಕ ಜ್ಞಾನೇಶ್ವರ ಮುನಿ ಮಹಾರಾಜರು (86) ಇಹಲೋಕವನ್ನು ತ್ಯೇಜಿಸಿದ್ದಾರೆ. ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *