Breaking News
Home / Breaking News / ಬಳ್ಳಾರಿ ಆಯ್ತು, ಈಗ ಬೆಳಗಾವಿ ಜಿಲ್ಲಾ ವಿಭಜನೆಯ ಭಜನೆ ಶುರು….!!!!

ಬಳ್ಳಾರಿ ಆಯ್ತು, ಈಗ ಬೆಳಗಾವಿ ಜಿಲ್ಲಾ ವಿಭಜನೆಯ ಭಜನೆ ಶುರು….!!!!

ಬೆಳಗಾವ- ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ರಾಜ್ಯದಲ್ಲೇ ಅತೀ ದೊಡ್ಡ ಜಿಲ್ಲೆಯಾಗಿದೆ,18 ವಿಧಾನಸಭಾ ಕ್ಷೇತ್ರಗಳನ್ನು,14 ತಾಲ್ಲೂಕುಗಳನ್ನು ಹೊಂದಿರುವ ಈ ಬೃಹತ್ ಜಿಲ್ಲೆ ವಿಭಜನೆ ಮಾಡಬೇಕು ಎನ್ನುವ ಕೂಗು ಮತ್ತೆ ಕೇಳಿ ಬಂದಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಅಭಿವೃದ್ಧಿಯ ದೃಷ್ಠಿಯಿಂದ ಬೆಳಗಾವಿ ಜಿಲ್ಲೆ ವಿಭಜನೆ ಆಗಬೇಕು ಎಂದು ಹಲವಾರು ವರ್ಷಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದೇವೆ,18 ಲೋಕಸಭಾ ಮತಕ್ಷೇತ್ರಗಳನ್ನು ಹೊಂದಿದ್ದ,ಧಾರವಾಡ ಜಿಲ್ಲೆ ಮೂರು ಜಿಲ್ಲೆಗಳಾಗಿ ವಿಭಜನೆ ಆಯ್ತು .ಬೆಳಗಾವಿ ಇನ್ನೂ ವಿಭಜನೆ ಆಗಿಲ್ಲ.ಚಿಕ್ಕೋಡಿ ಮತ್ತು ಗೋಕಾಕ್ ಎರಡೂ ಜಿಲ್ಲೆ ಆಗಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯ ಮಾಡಿದ್ದಾರೆ.

ಗಡಿಭಾಗದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಗಡಿ ವಿವಾದ ಇದೆ. ಈ ವಿವಾದ ಬಗೆ ಹರಿಯುವ ವರೆಗೂ ಬೆಳಗಾವಿ ಜಿಲ್ಲೆ ವಿಭಜನೆ ಬೇಡ ಎಂದು ಕನ್ನಡಪರ ಸಂಘಟನೆಗಳು ಹೋರಾಟಗಳನ್ನು ಮಾಡಿ ಒತ್ತಾಯ ಮಾಡಿದ್ದರಿಂದಲೇ ಜೆ ಹೆಚ್ ಪಟೇಲರು ಮುಖ್ಯಮಂತ್ರಿ ಆಗಿದ್ದಾಗ ಹಲವಾರು ಜಿಲ್ಲೆಗಳನ್ನು ವಿಭಜಿಸಿ ಬೆಳಗಾವಿಯನ್ನು ಕೈಬಿಟ್ಟಿದ್ದರು.

ಬೆಳಗಾವಿ ಜಿಲ್ಲೆಯಲ್ಲಿ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಿ,ಬೆಳಗಾವಿ ಮಹಾನಗರ ಪಾಲಿಕೆ ಸೇರಿದಂತೆ ಬೇರೆ,ಬೇರೆ ಸಂಘ ಸಂಸ್ಥೆಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದು ಮೆರೆದಾಡಿದ್ದ ಎಂಈಎಸ್ ಈಗ ಎಲ್ಲ ಸಂಘ ಸಂಸ್ಥೆಗಳಲ್ಲಿ ಅಧಿಕಾರ ಕಳೆದುಕೊಂಡು ಕಂಗಾಲ್ ಆಗಿದೆ.

ಗಡಿಯಲ್ಲಿ ಈಗ ಎಂಈಎಸ್ ಸಂಪೂರ್ಣವಾಗಿ ಅಸ್ತಿತ್ವ ಕಳೆದುಕೊಂಡು ಸಮಾಧಿಯಾಗಿದ್ದು,ಗಡಿ ವಿವಾದ ಈಗ ಇಲ್ಲವೇ ಇಲ್ಲ,ಬೆಳಗಾವಿ ಜಿಲ್ಲೆಯ ವ್ಯಾಪ್ತಿ ದೊಡ್ಡದಾಗಿದ್ದು,ಅಭಿವೃದ್ಧಿಯ ಹಿತದೃಷ್ಠಿಯಿಂದ ಬೆಳಗಾವಿ ಜಿಲ್ಲೆಯನ್ನು ಈಗ ವಿಭಜನೆ ಮಾಡಲೇಬೇಕು ಎನ್ನುವ ಕೂಗು ಮತ್ತೆ ಕೇಳಿ ಬಂದಿದೆ.

ಬಳ್ಳಾರಿ ಜಿಲ್ಲೆ ವಿಭಜನೆ ಮಾಡಿದ ಸರ್ಕಾರ ಬೆಳಗಾವಿ ಜಿಲ್ಲೆಯನ್ನೂ ವಿಭಜನೆ ಮಾಡಬೇಕೆಂಬ ಭಜನೆ ಈಗ ಬೆಳಗಾವಿಯಲ್ಲಿ ಶುರುವಾಗಿದೆ

ಕ್ಯಾಮರಾ ಪರ್ಸನ್ ಚಿಕ್ಕೋಡಿ ಜೊತೆ
ಗೋಕಾಕ್ ನ್ಯುಸ್ ನೆಟವರ್ಕ್
ಬೆಳಗಾವಿ

ಸುದ್ಧಿಯೊಳಗಿನ ಸುದ್ಧಿ
ನಿಮ್ಮ
ಬೆಳಗಾವಿ ಸುದ್ಧಿ

Check Also

ಜಗದೀಶ್ ಶೆಟ್ಟರ್ ಕುವೆಂಪು ನಗರಕ್ಕೆ ಹೋಗಿದ್ದು ಯಾಕೆ ಗೊತ್ತಾ.??

ಬೆಳಗಾವಿ-ಬೆಳಗಾವಿ ನಗರದಲ್ಲಿ ಬೆಳಗಿನ ಜಾವ ಕೋಳಿ ಕೂಗುವ ಮುನ್ನ ನಗರದಲ್ಲಿ ಜಗದೀಶ್ ಶೆಟ್ಟರ್ ಅವರ ಅವಾಜ್ ಕೇಳುತ್ತಿದೆ.ತಪ್ಪದೇ ದಿನನಿತ್ಯ ಚಹಾ …

Leave a Reply

Your email address will not be published. Required fields are marked *