ಬೆಳಗಾವಿಯ ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಬೆಳಗಾವಿ- smart city ಯೋಜನೆಯಡಿ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಸೋಮವಾರ (ಡಿ.೧೪) ಬೆಳಿಗ್ಗೆ ೧೦ ಘಂಟೆಯಿಂದ ಸಂಜೆ ೫.೩೦ ಘಂಟೆಯವರೆಗೆ ೩೩ ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಕಂಗ್ರಾಳಿ ಕೆ.ಎಚ್ ಹಾಗೂ ಅಲತಗಾ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅದೇ ರೀತಿ ಹು.ವಿ.ಸ.ಕಂ.ನಿ. ವತಿಯಿಂದ ತುರ್ತು ನಿರ್ವಹಣೆಯಿಂದ ಬೆಳಿಗ್ಗ್ಗೆ ೧೦ ಘಂಟೆಯಿಂದ ಸಂಜೆ ೪ ಘಂಟೆಯವರೆಗೆ ೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಕಲ್ಲೇಹೋಳ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ ಹಾಗೂ ಬಾಚಿ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ. ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆ ತಿಳಿಸಿದ್ದಾರೆ.
****

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *