ಹೋರಾಟದಲ್ಲಿ ಪಾಲ್ಗೊಂಡ ಬೆಳಗಾವಿಯ ಬಸ್ ಚಾಲಕನ ಸಾವು…

ಬೆಳಗಾವಿ- ಬೆಳಗಾವಿಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ ಮುಂದುರೆದಿದ್ದು ನಿನ್ನೆ ಶುಕ್ರವಾರ ಬೆಳಗಾವಿಯ ಬಸ್ ನಿಲ್ಧಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾತ್ರಿ ಮನೆಗೆ ತೆರಳಿದ್ದ ಬಸ್ ಚಾಲಕನೊಬ್ಬ ಹೃದಯಾಘಾತದಿಂದ ಸಾವನ್ನೊಪ್ಪಿದ ಘಟನೆ ನಡೆದಿದೆ.

ಬಸ್ ಚಾಲಕ ಹೃದಯಾಘಾತದಿಂದ ಸಾವನ್ನೊಪ್ಪಿದ್ದು.ಈತ ನಿನ್ನೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ. ಹೃದಯಾಘಾತದಿಂದ ನಿನ್ನೆ ತಡರಾತ್ರಿಯಲ್ಲಿ ಸಾವನ್ನಪ್ಪಿದ್ದಾನೆ.

ಪ್ರತಿಭಟನೆಯಲ್ಲಿ ಭಾಗಿಯಾದ ಸಂಧರ್ಭದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನಲೆ ಮನೆ ತೆರಳಿದ್ದ ಚಾಲಕ, ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್ (58) ಮೃತಪಟ್ಟಿದ್ದಾನೆ.

ಬೆಳಗಾವಿಯ ಎರಡನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ಚಾಲಕ, ನಗರ ಸಾರಿಗೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಎಂದು ತಿಳಿದು ಬಂದಿದೆ

ಬಸ್ ಚಾಲಕನ ಸಾವಿನ ಸುದ್ಧಿ ತಿಳಿದು,ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರು ಸಂತಾಪ ಸೂಚಿಸಿದ್ದಾರೆ.

Check Also

ಉತ್ತರಾಖಂಡದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಜಸ್ಟ್ ಮಿಸ್….!!!

ಬೆಳಗಾವಿ- ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಪತ್ನಿ ಸಮೇತ ಡೆಹ್ರಾಡೂನ್ ಗೆ ಹೋಗಿದ್ರು, ಅಲ್ಲಿ ಮೀಟೀಂಗ್ ಮುಗಿಸಿ ಒಟ್ಟು ಎಂಟು …

Leave a Reply

Your email address will not be published. Required fields are marked *