Breaking News

ಸವದತ್ತಿಯಲ್ಲಿ ಕಾಂಗ್ರೆಸ್ ನಾಯಕರ ಹಲ್ ಚಲ್…..

ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ ಇದೆ. ಆದರೆ ನಮ್ಮ ಸಮಸ್ಯೆ, ಚುನಾವಣೆ ಅಂತಾ ಬಂದಾಗ ನಾವೆಲ್ಲರೂ ಒಂದಾಗಬೇಕು. ಅಂದಾಗ ಪಕ್ಷವನ್ನು ಸಂಘಟನೆ ಮಾಡಲು ಸಾಧ್ಯ’ ಎಂದರು.

‘ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು. ನೀವು ಹೇಗೆ ಕೆಲಸ ಮಾಡುತ್ತಿರೋ, ಆ ರೀತಿ ಪಕ್ಷ ಬೆಳೆಯಲಿದೆ. ಗ್ರಾಮ ಪಂಚಾಯಿತಿ ಚುನಾವಣೆ, 2023ರ ವಿಧಾನಸಭೆ, 2024ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ. ಆದ ಕಾರಣ ಕಾರ್ಯಕರ್ತರು ಶ್ರಮ ವಹಿಸಿ ಕೆಲಸ ಮಾಡಿ’ ಎಂದು ಕರೆ ನೀಡಿದರು.

‘ಮೋದಿ ಗಾಳಿಯಲ್ಲೇ ನಾವು ಎರಡು ಬಾರಿ ಲೋಕಸಭಾ ಚುನಾವಣೆ ಅವರ ಸಮಾನವಾಗಿ ಗೆಲುವು ಸಾಧಿಸಿದ್ದೇವೆ. ಎಲ್ಲರೂ ಒಗ್ಗಟ್ಟಾದರೆ, ಗೆಲ್ಲಲು ಸಾಧ್ಯ. ಕಾರ್ಯಕರ್ತರ ಭಲದಿಂದ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯವಾಗಲಿದೆ’ ಎಂದು ಹೇಳಿದರು.

‘ ಜನರ ಸಮಸ್ಯೆಗೆ ಯಾರು ಹೆಚ್ಚು ಸ್ಪಂಧಿಸುತ್ತಾರೋ, ಅಂತವರು ಗೆಲಲ್ಲು ಸಾಧ್ಯ. ಆದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಮತದಾರರ ಹತ್ತಿರ ಹೋಗಿ, ಜನರ ಸಮಸ್ಯೆಗಳನ್ನ ಆಲಿಸಬೇಕು. ಅಂದಾಗ ಗ್ರಾಮ ಪಂಚಾಯಿತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಗೆಲ್ಲಲು ಸಾಧ್ಯವಾಗಲಿದೆ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ, ಸವದತ್ತಿಯ ಕಾಂಗ್ರೆಸ್ ಮುಖಂಡ ವಿಶ್ವಾಸ ವೈಧ್ಯ, ರವಿ ಯಲಿಗಾರ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಚನಗೌಡ ದ್ಯಾಮನಗೌಡ, ಮಲ್ಲು ಜಕಾತಿ,ರವಿ ಪಾಟೀಲ, ಸತೀಶ್ ಮಹೇಶ್ವರಿ ಸೇರಿದಂತೆ ಇತರರು ಇದ್ದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *