ಬೆಳಗಾವಿ- ಜನೇವರಿ 17 ರಂದು,ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮೀತ ಶಾ ಆಗಮಿಸಲಿದ್ದು,ಕಾರ್ಯಕ್ರಮ ಯಶಸ್ವಿಗೊಳಿಸಲು ಬೆಳಗಾವಿಯಲ್ಲಿ ತಯಾರಿ ಜೋರಾಗಿಯೇ ನಡೆದಿದೆ.
ಬೆಳಗಾವಿಯ ಪಂಚತಾರಾ ಹೊಟೇಲ್ ನಲ್ಲಿ ಪೂರ್ವಭಾವಿ ಸಭೆ ನಡೆಸಿದ ಬಿಜೆಪಿ ಮುಖಂಡರು,ಕಾರ್ಯಕ್ರಮದ ಜವಾಬ್ದಾರಿಗಳನ್ನು ಹಂಚಿಕೊಂಡರು.
ಜನಸೇವಾ ಸಮಾವೇಶ ಸಮಾರೋಪ ಸಮಾರಂಭಕ್ಕೆ ಶಾ ಆಗಮಿಸುತ್ತಿದ್ದು ಕಾರ್ಯಕ್ರಮ ಯಶಸ್ವಿಗೊಳ್ಳಿಸಲು ಬಿಜೆಪಿ ನಾಯಕರು ಕರೆ ನೀಡಿದರು.
ಜನಸೇವಾ ಸಮಾವೇಶ ಸಮಾರೋಪ ಸಮಾರಂಭಕ್ಕೆ ಜ.17ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೇಂದ್ರ ಗೃಹ ಸಚಿವ ಅಮಿತ ಶಾ ಆಗಮಿಸಲಿದ್ದು, ಕೋವಿಡ್- ಮಾರ್ಗಸೂಚಿಯಂತೆ ಕಾರ್ಯಕರ್ತರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬೆಳಗಾವಿ ಬಿಜೆಪಿ ಮುಖಂಡರ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು
ಈ ಸಂದರ್ಭದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಉಮೇಶ ಕತ್ತಿ, ಅಭಯ ಪಾಟೀಲ, ಅನಿಲ್ ಬೆನಕೆ, ಮಹಾಂತೇಶ ದೊಡ್ಡಗೌಡರ, ಮಹೇಶ ಕುಮಠಳ್ಳಿ, ಪಿ.ರಾಜೀವ, ಮಾಜಿ ರಾಜ್ಯ ಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ಬೆಳಗಾವಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ನಗರ ಘಟಕದ ಅಧ್ಯಕ್ಷ ಶಶಿ ಪಾಟೀಲ, ಬಿಜೆಪಿ ಮುಖಂಡರಾದ ರಾಜೇಶ ನಿರ್ಲಿ, ಜಗದೀಶ ಕವಠಗಿ, ಬಸವರಾಜ ಯಕ್ಕಂಚಿ, ಉಜ್ವಲಾ ಬಡವನಾಚೆ, ಹಣಮಂತ ಕೊಂಗಾಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.