

ಬೆಳಗಾವಿ- ಕೇಂದ್ರ ಗೃಹ ಸಚಿವ ಅಮೀತ ಶಾ ಅವರು ಇಂದು ಬೆಳಗಾವಿಗೆ ಬರುತ್ತಿರುವ ಹಿನ್ನಲೆಯಲ್ಲಿ ,ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೋಲೀಸರು ಬಂಧಿಸಿದ್ದಾರೆ..
ಇಂದು ಬೆಳ್ಳಂ ಬೆಳಿಗ್ಗೆ ವಿವಿಧ ರೈತಪರ ಸಂಘಟನೆಗಳು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರತಿಭಟಿಸಿದರು,ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಉರುಳು ಸೇವೆಮಾಡಿದ ರೈತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅಮೀತ ಶಾ ಗೋ ಬ್ಯಾಕ್…ರೈತ ವಿರೋಧಿ ಕಾನೂನು ಜಾರಿಗೆ ತಂದಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ದಿಕ್ಕಾರ ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು
ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೋಲೀಸರು ಬಂಧಿಸಿದರು,ಈ ಸಂಧರ್ಭದಲ್ಲಿ ರೈತರು ಮತ್ತು ಪೋಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ