ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಮಾಹಿತಿಯೇ ನನಗಿರಲಿಲ್ಲ

ಬೆಳಗಾವಿ-ರೆಸಾರ್ಟ್ ವಾಸ್ತವ್ಯ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ‌ ಸ್ಪಷ್ಟನೆ ನೀಡಿದ್ದು,ಚಿಕ್ಕಮಗಳೂರು ಪ್ರವಾಸ ಒಂದು ವಾರದ ಮೊದಲೇ ನಿಗದಿಯಾಗಿತ್ತು,ನನ್ನ ಪ್ರವಾಸದ ಮಾಹಿತಿ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಮೊದಲೇ ಕಳುಹಿಸಲಾಗಿತ್ತು,ಸಂಪುಟ ವಿಸ್ತರಣೆ, ಖಾತೆ ಬದಲಾವಣೆ ಮಾಹಿತಿಯೇ ನನಗಿರಲಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿಹೇಳಿದ್ದಾರೆ.

ಗಣರಾಜ್ಯೋತ್ಸವ ಧ್ವಜಾರೋಹಣ ಬಳಿಕ ಸಚಿವ ರಮೇಶ್ ಜಾರಕಿಹೊಳಿ‌ ಸುದ್ದಿಗೋಷ್ಠಿ ನಡೆಸಿದ ಅವರು,ಆದರೆ ನಮಗೆ ಡ್ಯಾಮೇಜ್ ಆಗುವ ರೀತಿಯಲ್ಲಿ ಮಾಧ್ಯಮಗಳಲ್ಲಿ ವರದಿ ಬಂದವು,ಸಂಪುಟ ವಿಸ್ತರಣೆ ವಿಚಾರದಲ್ಲಿ ಸಿಎಂ ನಿರ್ಧಾರಕ್ಕೆ ಬದ್ಧನಾಗಿದ್ದೇನೆ.ಮಾರ್ಚ್ ನಂತರ ಸಂಪುಟ ಪುನಾರಚನೆ ಸಾಧ್ಯತೆ ಇದೆ.ಬೆಳಗಾವಿ ಜಿಲ್ಲೆಗೆ ಮೊತ್ತೊಂದು ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ,ಅಭಯ ಪಾಟೀಲ ಕೂಡ ಸಚಿವಾಕಾಂಕ್ಷಿ ಆಗಿದ್ದಾರೆ, ಪ್ರಯತ್ನ ಕೂಡ ಮಾಡ್ತಿದ್ದಾರೆ. ಎಲ್ಲರೂ ನನ್ನ ಸ್ನೇಹಿತರೇ, ಯಾರಿಗಾದರೂ ಸಿಗಲಿ ಖುಷಿ ಪಡ್ತಿನಿ ಎಂದರು ಸಾಹುಕಾರ್ ರಮೇಶ್ ಜಾರಕಿಹೊಳಿ,

ನೂತನ ಕೃಷಿ ಮಸೂದೆ ಜಾರಿ ಖಂಡಿಸಿ ದೇಶಾದ್ಯಂತ ರೈತರ ಪ್ರತಿಭಟನೆ ವಿಚಾರ,ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ, ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ, ರೈತರ ಸಮಸ್ಯೆಗಳನ್ನು ಪ್ರಧಾನಿ, ಮುಖ್ಯಮಂತ್ರಿ ಬಗೆಹರಿಸುತ್ತಾರೆ. ಭಾರತದ ಕೋವಿಡ್ ವ್ಯಾಕ್ಸಿನ್ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಸಿಕೆ ಪಡೆಯಲು ಯಾರೂ ಹಿಂದೇಟು ಹಾಕಬಾರದು.ಕೆಲವರು ಕೊರೊನಾ ಲಸಿಕೆ ಬಗ್ಗೆ ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ. ಭಾರತ ವ್ಯಾಕ್ಸಿನ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ವ್ಯಾಕ್ಸಿನ್ ಬಗ್ಗೆ ಭಯ ಬೇಡ, ವೈದ್ಯಕೀಯ ಸಿಬ್ಬಂದಿ ತ್ವರಿತವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡರು.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ,ಪಕ್ಷದ ಚಿಹ್ನೆ ಮೇಲೆ ಚುನಾವಣೆ ಮಾಡ್ತೀರಾ..? ಎಂದಾಗ ಈ ಕುರಿತು ಸ್ಥಳೀಯ ಶಾಸಕರು ನಿರ್ಣಯ ಕೈಗೊಳ್ಳುತ್ತಾರೆ.ಎಂದು ರಮೇಶ್ ಜಾರಕಿಹೊಳಿ ಹೇಳಿದರು.

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *