
ಬೆಳಗಾವಿ-ಇತ್ತೀಚಿಗೆ ಬೆಳಗಾವಿ ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಅದರಲ್ಲಿಯೂ,ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ನಡೆಯುತ್ತಿರುವದು ಆತಂಕದ ಸಂಗತಿಯಾಗಿದೆ.
ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ,ಬೆಳಗಾವಿ ಜಿಲ್ಲೆ ರಾಯಬಾಗ ರೈಲುನಿಲ್ದಾಣ ಬಳಿ ನಡೆದಿದೆ.
ವೃದ್ಧ ತಂದೆ, ತಾಯಿ, ಇಬ್ಬರು ಗಂಡು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು,ನಿನ್ನೆ ರಾತ್ರಿ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ,ಆದರೂ ಸಾಲಿನ ಸುಳಿಯಲ್ಲಿ ಈ ಕುಟುಂಬ ಸಿಲುಕಿತ್ತು,ಸಾಲಗಾರನ ಕಾಟ ತಾಳಲಾರದೇ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದ್ದು,ಪೋಲೀಸರು ತನಿಖೆ ಆರಂಭಿಸಿದ್ದಾರೆ.
ಬೀರಡಿ ಗ್ರಾಮದ ಸಾತಪ್ಪ ಸುತಾರ್(60), ಪತ್ನಿ ಮಹಾದೇವಿ(50) ಮಕ್ಕಳಾದ ದತ್ತಾತ್ರೇಯ (28), ಸಂತೋಷ (25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಗಳಾಗಿದ್ದಾರೆ.ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳ ರವಾನೆ ಮಾಡಲಾಗಿದ್ದು ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರ ಭೇಟಿ, ಪರಿಶೀಲನೆ ಮಾಡುತ್ತಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ