ಬೆಳಗಾವಿ-ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣೆ ಅಧ್ಯಾದೇಶ 2020’ನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜ.30) ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ಅಶೋಕ ಕೊಳ್ಳಾ ಅವರು ಸಭೆಯನ್ನು ನಿರ್ವಹಿಸಿದರು.
ಸಭೆಯಲ್ಲಿ ಡಿವೈಎಸ್ಪಿ ಕರುಣಾಕರ ಶೆಟ್ಟಿ, ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಾನಂದ ಮಗ್ದುಂ, ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯರಾದ ಡಾ: ಸರನೋ ಭತ್, ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರುಗಳಾದ ರಾಜೇಂದ್ರ ಜೈನ್ (ಕಟಾರಿಯಾ), ಅರಣ್ಯ ಸಂರಕ್ಷಣಾಧಿಕಾರಿಗಳು, ಪಶುಪಾಲನೆ ಇಲಾಖೆಯ ತಾಲೂಕಿನ ಸಹಾಯಕ ನಿರ್ದೇಶಕರುಗಳು ಹಾಜರಿದ್ದರು.
****
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ