ಬೆಳಗಾವಿ-ಬೆಳಗಾವಿ ನಗರದಲ್ಲಿ ವಾಹನ ದಟ್ಟನೆ ನಿಯಂತ್ರಿಸಲು,ಬೆಳಗಾವಿಯಿಂದ ಗೋವಾಕ್ಕೆ ಹೋಗಲು ಅನಕೂಲವಾಗಲೆಂದು,ಬೆಳಗಾವಿ ನಗರದ ಟ್ರಾಫಿಕ್ ಡೈವೋರ್ಟ್ ಮಾಡುವ ಉದ್ದೇಶಕ್ಕಾಗಿ ಹಲಗಾ-ಮಚ್ಛೆ ಬೈ ಪಾಸ್ ಕಾಮಗಾರಿ ನಡೆಯುತ್ತಿದ್ದು ಈ ಕಾಮಗಾರಿಗೆ ರೈತರು ತೀವ್ರ ವಿರೋಧ ವ್ಯೆಕ್ತ ಪಡಿಸಿದ್ದಾರೆ.
ರಸ್ತೆ ನಿರ್ಮಾಣಕ್ಕೆ ಬಂದ ಜೆಸಿಬಿ ಎದುರು ರೈತರು ಮಲಗಿ ಪ್ರತಿಭಟನೆ ನಡೆಸುತ್ತಿದ್ದಾರೆ.ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದ ಬಳಿ ಪ್ರತಿಭಟನೆ ನಡೆಯುತ್ತಿದೆ.
ಹೈಕೋರ್ಟ್ ನಲ್ಲಿ ತಡೆಯಾಜ್ಞೆ ಇದ್ದರೂ ಕಾಮಗಾರಿ ನಡೆಸುತ್ತಿದ್ದೀರಿ ಎಂದು ರೈತರಯ ಆಕ್ರೋಶ ವ್ಯೆಕ್ತಪಡಿಸಿದ್ದು,ಸ್ಥಳದಲ್ಲಿ ರೈತರು ಹಾಗೂ ರಾಷ್ಟ್ರೀಯ ಹೆದ್ಧಾರಿ ಪ್ರಾಧಿಕಾರ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು. ಯಾವುದೇ ಕಾರಣಕ್ಕೂ ರಸ್ತೆ ನಿರ್ಮಾಣಕ್ಕೆ ಬಿಡೋದಿಲ್ಲ ಅಂತ ಪಟ್ಟು ಹಿಡಿದಿರುವ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ.
ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ವ್ಯಾಪಕ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.