ಬೆಳಗಾವಿ-ಉಪಚುನಾವಣೆ ಯಾವಾಗ ಘೋಷಣೆ ಆಗುತ್ತೆ ಅಂತಾ ನಾವು ಹೇಳಕ್ಕಾಗಲ್ಲ ಎಂದು ಬೆಳಗಾವಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವಕುಮಾರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು,ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 38,57,982 ಮತದಾರರು ಇದ್ದಾರೆ, 19,52,160 ಪುರುಷ, 19,00,822 ಮಹಿಳಾ ಮತದಾರರು ಇದ್ದಾರೆ,
19,836 ಸೇವಾ ಮತದಾರರು ಇದರಲ್ಲಿ 354 ಮಹಿಳಾ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳುವಂತೆ ಮನವಿ ಮಾಡಿಕೊಂಡ ಅವರು,ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ರೆ ಈಗಲೂ ಹೆಸರು ನೋಂದಾಯಿಸಬಹುದು ಎಂದು ಹೇಳಿದರು.
ಉಪಚುನಾವಣೆ ಘೋಷಣೆ ಆದ ಬಳಿಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಲ್ಲ,ಶಿರಾ, ಆರ್.ಆರ್.ನಗರ ಉಪಚುನಾವಣೆಯಲ್ಲಿ ಕೋವಿಡ್ ಹಿನ್ನೆಲೆ ವಿಶೇಷ ಸೌಲಭ್ಯ ನೀಡಲಾಗಿತ್ತು,ಆ ಸೌಲಭ್ಯ ಮುಂದೆ ನಡೆಯಲಿರುವ ಉಪಚುನಾವಣೆಯಲ್ಲಿ ಮುಂದುವರೆಸುತ್ತೇವೆಬೆಳಗಾವಿ ಜಿಲ್ಲೆಯಲ್ಲಿ ಇರುವ ದಿವ್ಯಾಂಗರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನೊಂದಾಯಿಸಬೇಕು ಎಂದರು.
ದಿವ್ಯಾಂಗ ಮತದಾರರು, 80 ವರ್ಷ ಮೇಲ್ಪಟ್ಟವರು, ಕೋವಿಡ್ ಸೋಂಕಿತರಿಗೆ ಪೋಸ್ಟಲ್ ಬ್ಯಾಲೆಟ್ ಸೌಲಭ್ಯ ಒದಗಿಸಲಾಗುತ್ತಿದ್ದು, ಈ ಸೌಲಭ್ಯ ಮುಂದೆ ನಡೆಯಲಿರುವ ಉಪಚುನಾವಣೆಯಲ್ಲೂ ಮುಂದುವರಿಯುತ್ತೆ ,ಚುನಾವಣಾ ಅಕ್ರಮ ತಡೆಯದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದೇವೆ.ಎಂದು ಬೆಳಗಾವಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಡಾ.ಸಂಜೀವಕುಮಾರ್ ತಿಳಿಸಿದರು.