ಬೆಳಗಾವಿ:ಕೇಂದ್ರ ರೈಲ್ವೆ ಇಲಾಖೆ ಸಚಿವರಾಗಿದ್ದ ಸುರೇಶ ಅಂಗಡಿ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆಗೆ ಉಪ ಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಆದರೆ ಬಿಜೆಪಿ ಪಾಳೆಯದಲ್ಲಿ ದಿನಕ್ಕೊಂದು ಹೆಸರು ಕೇಳಿ ಬರುತ್ತಿವೆ. ಇದೀಗ ಬೆಳಗಾವಿ ಬಿಜೆಪಿ ಟಿಕೆಟ್ ನಗರದ ಖ್ಯಾತ ವೈದ್ಯ ಹಾಗೂ ವಿಜಯಾ ಆರ್ಥೋ ಆಸ್ಪತ್ರೆ ಮುಖ್ಯಸ್ಥ ಡಾ. ರವಿ ಪಾಟೀಲ ಅವರಿಗೆ ಸಿಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಕಾವು ಪಡೆಯುತ್ತಿದೆ. ಪಂಚಮಸಾಲಿ ಸಮಾಜ ಸಮಾಧಾನ ಪಡಿಸಲು ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದೆ. ಬೆಳಗಾವಿ ಟಿಕೆಟ್ ಅನ್ನು ಡಾ. ರವಿ ಪಾಟೀಲಗೆ ನೀಡಲು ಬಿಜೆಪಿ ಹೈಕಮಾಂಡ್ ವಲಯದಲ್ಲಿ ಚಿಂತನೆ ನಡೆದಿದ್ದು ಆ ಮೂಲಕ ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ಪಂಚಮಸಾಲಿ ಸಮಾಜವನ್ನು ತನ್ನತ್ತ ಸೆಳೆಯುವುದೇ ಬಿಜೆಪಿ ರಣತಂತ್ರವಾಗಿದೆ ಎಂದು ಹೇಳಲಾಗುತ್ತಿದೆ.
ಡಾ. ರವಿ ಪಾಟೀಲ ದಶಕಗಳಿಂದ ಬಿಜೆಪಿ ಜತೆಗೆ ಇದ್ದಾರೆ. ಬಿಜೆಪಿ ಮೆಡಿಕಲ್ ಸೆಲ್ ನಲ್ಲಿಯೂ ಡಾ. ರವಿ ಪಾಟೀಲ ಕೆಲಸ ಮಾಡಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದೂ ಡಾ. ರವಿ ಪಾಟೀಲ ಗುರುತಿಸಿಕೊಂಡಿದ್ದಾರೆ. ಪಕ್ಷ ನಿಷ್ಠೆ ಹಾಗೂ ಪಂಚಮಸಾಲಿ ಸಮಾಜ ಒಲಿಸಿಕೊಳ್ಳಲು ಡಾ. ರವಿ ಪಾಟೀಲ ಅವರಿಗೆ ಟಿಕೆಟ್ ಸಿಗುತ್ತದೆ ಎನ್ನುವ ಚರ್ಚೆ ಈಗ ಜೋರಾಗಿಯೇ ನಡೆದಿದೆ.
ಬೆಳಗಾವಿ ಲೋಕಸಭೆ ಉಪಚುನಾವಣೆಯಲ್ಲಿ ಡಾ.ರವಿ ಪಾಟೀಲ ಕೂಡ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿ ಆಗಿದ್ದಾರೆ. ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರಕ್ಕೂ ಡಾ.ರವಿ ಪಾಟೀಲ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದರು. ಟಿಕೆಟ್ ಸಿಗದಿದ್ದರೂ ಡಾ. ರವಿ ಪಾಟೀಲ ಪಕ್ಷಕ್ಕೆ ನಿಷ್ಠರಾಗಿಯೇ ಉಳಿದಿದ್ದರು. ಇದೀಗ ಡಾ.ರವಿ ಪಾಟೀಲ ಅವರಿಗೆ ಬಿಜೆಪಿ ಟಿಕೆಟ್ ನೀಡಲು ಟಿಕೆಟ್ ಸಿಗುವುದು ಬಹುತೇಕ ಖಚಿತ ಎಂಬ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ.
ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಪಂಚಮಸಾಲಿ ಸಮಾಜ ಪ್ರಬಲವಾಗಿದ್ದು,ಈಸಮಾಜದ ಪ್ರಬಲ ಅಭ್ಯರ್ಥಿಯಾಗಿರುವ ಡಾ. ರವಿ ಪಾಟೀಲ ಅವರಿಗೆ ಟಿಕೆಟ್ ಕೊಟ್ಟರೆ ಬಿಜೆಪಿ ಗೆಲುವು ಸುಲಭವಾಗುತ್ತದೆ ಎನ್ನುವದು ಬೆಜೆಪಿ ಲೆಕ್ಕಾಚಾರವಾಗಿದೆ ಎಂದು ತಿಳಿದು ಬಂದಿದೆ..