Breaking News

ದಂಡ ವಸೂಲಿ ಜತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆ

ಬೆಳಗಾವಿ: ರಾಜ್ಯ ಸರ್ಕಾರಿ ನೌಕರರು, ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ ಸಂಸ್ಥೆಯ ಅಧಿಕಾರಿ/ ನೌಕರರು ತಪ್ಪು ಮಾಹಿತಿ ನೀಡಿ ಬಿ.ಪಿ.ಎಲ್ ಪಡಿತರ ಚೀಟಿಯನ್ನು ಪಡೆದಿದ್ದಲ್ಲಿ ಅದನ್ನು ಸ್ವಯಂ ಪ್ರೇರಣೆಯಿಂದ ಆಹಾರ ಇಲಾಖೆಗೆ ಅಧ್ಯರ್ಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಹಾರ, ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ ಕತ್ತಿ ಅವರು ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು, ನಿಗಮ ಮಂಡಳಿ ಪ್ರಾಧಿಕಾರ ವಿಶ್ವವಿದ್ಯಾಲಯ ಸಂಸ್ಥೆಯ ಅಧಿಕಾರಿ/ ನೌಕರರು ಮತ್ತು ಕಾರ್ಖಾನೆಯ ನೌಕರರು ಇಲಾಖೆಗೆ ತಪ್ಪು ಮಾಹಿತಿ ನೀಡಿ ಆಧ್ಯತಾ(ಬಿ.ಪಿ.ಎಲ್) ಚೀಟಿಯನ್ನು ಪಡೆದಿರುವುದು ಗಮನಕ್ಕೆ ಬಂದಿರುತ್ತದೆ ಎಂದು ಇತ್ತೀಚೆಗೆ ಸಭೆಯಲ್ಲಿ ತಿಳಿಸಿದ್ದಾರೆ.

ತಪ್ಪು ಮಾಹಿತಿಯನ್ನು ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಫೆ. 20ರೊಳಗಾಗಿ ಸಂಬಂಧಪಟ್ಟ ಆಹಾರ ಇಲಾಖೆಯ ಕಾರ್ಯಾಲಯಕ್ಕೆ ಅಧ್ಯರ್ಪಿಸಿದ್ದರೆ ಯಾವುದೇ ರೀತಿಯ ಕ್ರಮವನ್ನು ವಹಿಸಲಾಗುವುದಿಲ್ಲ.

ತದನಂತರ ಎಚ್.ಆರ್.ಎಮ್.ಎಸ್ ತಂತ್ರಾಂಶದಿಂದ ಮಾಹಿತಿ ಪಡೆದು ಶೋಧ ನಡೆಸಿ ಪತ್ತೆ ಹಚ್ಚಿದ್ದಲ್ಲಿ ಅಂತಹ ನೌಕರರ ಮೇಲೆ Illigal Possession of Unauthorized Ration card Act- 1977 ರಡಿ ಕಾನೂನು ಪ್ರಕಾರ ಕ್ರಮ ವಹಿಸಿ ಪಡಿತರ ಚೀಟಿ ಪಡೆದ ದಿನಾಂಕದಿಂದ ಇಲ್ಲಿಯವರೆಗೆ ದಂಡವನ್ನು ವಸೂಲಿ ಮಾಡಲಾಗುವುದು ಹಾಗೂ ಅಂತಹ ನೌಕರರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ನಿಯಮಾನುಸಾರವಾಗಿ ಕಾನೂನು ಕ್ರಮವನ್ನು ವಹಿಸಬೇಕು ಎಂದು ಸಚಿವರು ಸಭೆಯಲ್ಲಿ ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತಾರೆ.

ಇದರಂತೆ ಜಿಲ್ಲೆಯಲ್ಲಿರುವ ಎಲ್ಲಾ ನೌಕರರು ನಿಯಮಬಾಹಿತವಾಗಿ ಪಡೆದುಕೊಂಡಿರುವ ಪಡಿತರ ಚೀಟಿಗಳನ್ನು ಕೂಡಲೇ ಹಿಂದಿರುಗಿಸಬೇಕು. ಒಂದು ವೇಳೆ ಪಡಿತರ ಚೀಟಿ ಹಿಂದಿರುಗಿಸದಿದ್ದರೆ ದಂಡ ವಸೂಲಿಯ ಜತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.
*****

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *