ಬೆಳಗಾವಿ- ಹಲಗಾ ಮಚ್ಛೆ ಬೈಪಾಸ್ ರಸ್ತೆ ಕಾಮಗಾರಿಗೆ ರೈತರು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲಿಯೇ ರೈತರು ಮೊತ್ತೊಂದು ಗಂಭೀರ ಆರೋಪ ಮಾಡಿರುವ ಹಿನ್ನಲೆಯಲ್ಲಿ,ಜಿಲ್ಲಾಧಿಕಾರಿ ಹಿರೇಮಠ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಈ ರಸ್ತೆ ಕಾಮಗಾರಿಯಲ್ಲಿ ಜಮೀನು ಕಳೆದುಕೊಂಡ ರೈತನಿಗೆ 57 ,ಲಕ್ಷ ರೂ ಪರಿಹಾರ ಕೊಡಲು 11 ಲಕ್ಷ ರೂ ಕಮೀಷನ್ ಕೇಳುತ್ತಿದ್ದಾರೆ ಎಂದು ರೈತರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಶೀಲನೆ ನಡೆಸಿದ್ದಾರೆ.
ಇತ್ತೀಚಿಗೆ ರೈತರು ಅಹೋ ರಾತ್ರಿ ಪ್ರತಿಭಟನೆ ನಡೆಸಿ ಹಲಗಾ ಮಚ್ಛೆ ಬೈಪಾಸ್ ಕಾಮಗಾರಿ ನಿಲ್ಲಿಸುವಂತೆ ಅಹೋ ರಾತ್ರಿ ಪ್ರತಿಭಟನೆ ಮಾಡಿ ಜಿಲ್ಲಾಡಳಿತದ ಗಮನ ಸೆಳೆದಿದ್ದರು, ರೈತರ ಜೊತೆ ಸಭೆ ನಡೆಸಿದ್ದ ಜಿಲ್ಲಾಧಿಕಾರಿಗಳು ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಸಂಧರ್ಭದಲ್ಲಿಯೇ ರೈತರು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.
ರೈತರಿಗೆ ಪರಿಹಾರ ಕೊಡಲು ಕಮಿಷನ್ ಕೇಳಿದವರ್ಯಾರು ? 57 ಲಕ್ಷ ಪರಿಹಾರ ಕೊಡಲು 11 ಲಕ್ಷ ರೂ ಕಮಿಷನ್ ಕೇಳಿದ ಭೂಪ ಯಾರು ? ಅನ್ನೋದನ್ನು ಜಿಲ್ಲಾಧಿಕಾರಿಗಳು ಸ್ವತಃ ಸ್ಥಳಕ್ಕೆ ಭೇಟಿ ನೀಡಿ ರೈತರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ಒಟ್ಟಾರೆ ಹಲಗಾ- ಮಚ್ಛೆ ಕಾಮಗಾರಿಗೆ ದಿನಕ್ಕೊಂದು ಕಂಟಕ ಎದುರಾಗುತ್ತಿದ್ದು, ಈ ವಿಚಾರದಲ್ಲಿ ರೈತರಿಗೆ ಅನ್ಯಾಯವಾದಂತೆ ಜಿಲ್ಲಾಡಳಿತ ಶಾಶ್ವತ ಪರಿಹಾರ ಕಂಡು ಹಿಡಿಯಬೇಕಾಗಿದೆ.