Breaking News
Home / Breaking News / ಯಲ್ಲಮ್ಮ, ಚಿಂಚಲಿ ಮಾಯಕ್ಕ ದೇವಿ, ದರ್ಶನಕ್ಕೆ ನಿರ್ಬಂಧ

ಯಲ್ಲಮ್ಮ, ಚಿಂಚಲಿ ಮಾಯಕ್ಕ ದೇವಿ, ದರ್ಶನಕ್ಕೆ ನಿರ್ಬಂಧ

ಬೆಳಗಾವಿ- ಕೋವಿಡ್ ರೂಪಾಂತರ ಭೀತಿ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಕ್ಕ ದೇವಿ ದೇವಸ್ಥಾನಗಳ ಸಾರ್ವಜನಿಕ ದರ್ಶನಕ್ಕೆ ನಿರ್ಬಂಧ ಮಾಡಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಆದೇಶ..ಹೀಗಿದೆ.

ಕೋವಿಡ್-19
ಪ್ರಸ್ತಾವನೆಯಲ್ಲಿ ವಿವರಿಸಿದಂತೆ ಸಾರ್ವಜನಿಕರ ಮತ್ತು ಭಕ್ತಾಧಿಗಳ ಆರೋಗ್ಯದ ಹಿತದೃಷ್ಟಿಯಿಂದ
(ಕರೋನಾ)ರೂಪಾಂತರಿ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಕುರಿತು
ಮುಂಜಾಗೃತಾ ಕ್ರಮವಾಗಿ ಎಂ.ಜಿ.ಹಿರೇಮಠ, ಭಾ.ಆ.ಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಬೆಳಗಾವಿ
ಜಿಲ್ಲೆ ಆದ ನಾನು ವಿಪತ್ತು ನಿರ್ವಹಣಾ ಕಾಯ್ದೆ 2005, “The Karnataka Epidemic Diseases, COVID-19
Regulations, 2020 “ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ಕಲಂ 144 ರಡಿ ಬೆಳಗಾವಿ ಜಿಲ್ಲೆಯ ಸವದತ್ತಿ
ತಾಲೂಕಿನ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಹಾಗೂ ಶ್ರೀ ಜೋಗಳಭಾವಿ ಸತ್ತೆಮ್ಮ ದೇವಿಯ
ದೇವಸ್ಥಾನ ಮತ್ತು ರಾಯಬಾಗ ತಾಲೂಕಿನ ಶ್ರೀ ಚಂಚಲಿ ಮಾಯಕ್ಕಾ ದೇವಿಯ ದೇವಸ್ಥಾನದ ಸಾರ್ವಜನಿಕ
ದರ್ಶನವನ್ನು ಮುಂದಿನ ಆದೇಶದವರೆಗೆ ನಿರ್ಭಂಧಿಸಿ ಆದೇಶಿಸಿದೆ.
ಆದರೆ ಸದರಿ ದೇವಸ್ಥಾನಗಳ ಆಡಳಿತ ಮಂಡಳಿಯವರು ಈ ದೇವಸ್ಥಾನಗಳಲ್ಲಿ ನಡೆಯುವ ದಿನನಿತ್ಯದ
ಧಾರ್ಮಿಕ ವಿಧಿ ವಿಧಾನಗಳನ್ನು ಹಾಗೂ ಎಲ್ಲ ಮುಂಜಾಗೃತಾ ಕ್ರಮವನ್ನು ವಹಿಸಿ ನಡೆಸುವ ಷರತ್ತಿಗೊಳಪಟ್ಟು
ವಿನಾಯಿತಿ ನೀಡಿದೆ.

ವಿಷಯವಾಗಿ ಮೇಲಿನ ಆದೇಶವನ್ನು ಜಾರಿಗೊಳಿಸಲು ಸದರಿ ದೇವಸ್ಥಾನಗಳ ಆಡಳಿತ
ಮಂಡಳಿಗಳು, ಜಿಲ್ಲಾ ಪೊಲೀಸ ಅಧೀಕ್ಷಕರು, ಬೆಳಗಾವಿ, ಉಪವಿಭಾಗಾಧಿಕಾರಿಗಳು ಬೈಲಹೊಂಗಲ/ಚಿಕ್ಕೋಡಿ,
ತಹಶೀಲದಾರರು ಸವದತ್ತಿ ಹಾಗೂ ರಾಯಬಾಗ ಮತ್ತು ಸಂಬಂಧಪಟ್ಟ ಎಲ್ಲ ಇಲಾಖಾ ಅಧಿಕಾರಿಗಳು ಕ್ರಮ
ಕೈಗೊಳ್ಳುವದು.
ಈ ಆದೇಶವನ್ನು ಇಂದು ದಿನಾಂಕ: .02.2021, ರಂದು ನನ್ನ ಸಹಿ ಮತ್ತು ಮೊಹರಿನೊಂದಿಗೆ
ಹೊರಡಿಸಲಾಗಿದೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ
ದಂಡ ಸಂಹಿತೆ 188 ರ ಪರ ಕ್ರಮ ಜರುಗಿಸಲಾಗುವುದು.

ಜಿಲ್ಲಾ ಮಂತ್ರಿಗಳ ಪ್ರತಿಕ್ರಿಯೆ…

ಹೆಚ್ಚುತ್ತಿರುವ ಕೋವಿಡ್ ಪ್ರಕರಣ ; ಸೋಂಕಿನ ಅಪಾಯ ತಪ್ಪಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ – ಕರ್ನಾಟಕ ಗಡಿಯಲ್ಲಿ ಸೂಕ್ತ ಕ್ರಮಗಳನ್ನು ವಹಿಸುವಂತೆ ಈಗಾಗಲೇ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಹೆಚ್ಚಿನ ಮಾಹಿತಿ ಪಡೆದು ಈ ಬಗ್ಗೆ ಸರ್ಕಾರದಿಂದಲೂ ಸೂಕ್ತ ನಿರ್ದೇಶನ ನೀಡುತ್ತೇನೆ.
– ರಮೇಶ್ ಜಾರಕಿಹೊಳಿ‌ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು

Check Also

ಅಕ್ರಮ ಗೋ ಸಾಗಾಟ ; ಟ್ರಕ್ ಚಾಲಕನ ಮೇಲೆ ನೈತಿಕ ಪೊಲೀಸ್ ಗಿರಿ

ಬೆಳಗಾವಿ : ಅಕ್ರಮ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ …

Leave a Reply

Your email address will not be published. Required fields are marked *