ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗಾಗಿ ಸರ್ಕಾರ ರಚಿಸಿದ ಎಸ್ ಐಟಿ ತಂಡದಲ್ಲಿ ಬೆಳಗಾವಿಯಲ್ಲಿ ಕರ್ತವ್ಯ ನಿಭಾಯಿಸಿದ ಇಬ್ಬರು ಅಧಿಕಾರಿಗಳು ಇರುವದು ವಿಶೇಷವಾಗಿದೆ.
ಬೆಳಗಾವಿ ನಗರ ಪೋಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸಿದ್ದ ಸೌಮೇಂದ್ರ ಮುಖರ್ಜಿಎಸ್ ಐ ಟಿ ತಂಡದ ನೇತ್ರತ್ವ ವಹಿಸಿದ್ದು ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಮಾಡಿದ ಸಂದೀಪ ಪಾಟೀಲ ಅವರೂ ಈ ತಂಡದಲ್ಲಿದ್ದಾರೆ.
ಎಸ್ ಐ,ಟಿ ತನಿಖಾ ತಂಡ ರಚನೆಯಾದ ಕೆಲವೇ ಕ್ಷಣಗಳಲ್ಲಿಯೇ ಕಾರ್ಯ ಪ್ರವೃತ್ತವಾದ ತಂಡ ಇಂದು ಕಾರ್ಯಾಚರಣೆ ಆರಂಭಿಸಿದ್ದು,ದಿನೇಶ್ ಕಲ್ಲಹಳ್ಳಿಗೆ ಸಿಡಿ ಕೊಟ್ಟ ವ್ಯೆಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದ ಅಧಿಕಾರಿಗಳ ತಂಡವನ್ನು ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಪ್ರಕಟಿಸಿದ್ದಾರೆ. ತಂಡದಲ್ಲಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಕೇಂದ್ರ ವಿಭಾಗ ಡಿಸಿಪಿ ಎಂ.ಎನ್.ಅನುಚೇತ್, ಅಪರಾಧ ವಿಭಾಗದ ಡಿಸಿಪಿ (ಕ್ರೈಂ- 1) ರವಿ ಕುಮಾರ್ ಇರಲಿದ್ದಾರೆ.ಸಿಸಿಬಿ ಎಸಿಪಿ ಧರ್ಮೇಂದ್ರ ಪ್ರಕರಣದ ತನಿಖಾಧಿಕಾರಿಯಾಗಿದ್ದು, ಇವರ ಜೊತೆಗೆ ಸಿಸಿಬಿ ಇನ್‌ಸ್ಪೆಕ್ಟರ್ ಪ್ರಶಾಂತ್ ಬಾಬು, ಕಬ್ಬನ್‌ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ಸಹ ವಿಶೇಷ ತನಿಖಾ ತಂಡದಲ್ಲಿದ್ದಾರೆ. ರಚನೆಯಾಗಿರುವ ಎಸ್ಐಟಿ ತನಿಖೆ ಶುರು ಮಾಡಿದೆ.