ಬೆಳಗಾವಿ- ಸಮೀಪದ ಕಾಕತಿ ಪೋಲೀಸ್ ಠಾಣೆಯಲ್ಲಿ ಯುವತಿ ನಾಪತ್ತೆಯಾದ ಕುರಿತು ಪ್ರಕರಣ ದಾಖಲಾಗಿದೆ.
ಬೆಲ್ಲದ ಬಾಗೇವಾಡಿ ಗ್ರಾಮದ 27 ವರ್ಷದ ಪ್ರೀತಿ ಗೌತಮ ಪದಪ್ಪಗೋಳ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಯುವತಿಯ ಪಾಲಕರು ಕಾಕತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರೀತಿ ಗೌತಮ ಪದಪ್ಪಗೋಳ ಭೂತರಾಮನಹಟ್ಟಿ ಗ್ರಾಮದಲ್ಲಿರುವ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಳು,ವಿಶ್ವ ವಿದ್ಯಾಲಯದಲ್ಲಿ ಸಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವದಾಗಿ ಪಾಲಕರಿಗೆ ಹೇಳಿ ಬಂದಿದ್ದ ಯುವತಿ,ಸಂಜೆ ಪಾಲಕರಿಗೆ ಫೋನ್ ಮಾಡಿ ನಾನು ಮದುವೆಯಾಗಿದ್ದೇನೆ ಎಂದು ಫೋನ್ ಮಾಡಿ ನಂತರ ನಾಪತ್ತೆಯಾಗಿದ್ದಾಳೆ ಎಂದು ಕಾಕತಿ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ತಿಳಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಕಾಕತಿ ಪೋಲೀಸರು ಯುವತ್ತಿಯ ಪತ್ತೆಗೆ ಕಾರ್ಯಾಚರಣೆ ಶುರು ಮಾಡಿದ್ದಾರೆ.
ಚಿತ್ರದಲ್ಲಿ ಕಾಣುವ ಈ ಯುವತಿ ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಸಮೀಪದ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ