ಬೆಳಗಾವಿ ಬೈ ಇಲೆಕ್ಷನ್ ಬಿಜೆಪಿಯಿಂದ ಅಖಾಡಾಕ್ಕಿಳಿದ, ಸ್ವಾಮೀಜಿ…

ಬೆಳಗಾವಿ,- ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಮಂಗಳವಾರ (ಮಾ.23) ಇಬ್ಬರು ಅಭ್ಯರ್ಥಿಗಳು ಒಟ್ಟು ನಾಲ್ಕು ನಾಮಪತ್ರಗಳನ್ನು ಸಲ್ಲಿಸಿದ್ದಾರೆ‌.

ವೆಂಕಟೇಶ್ವರ ಮಹಾಸ್ವಾಮೀಜಿ ಅವರು ಒಟ್ಟು ಮೂರು ನಾಮಪತ್ರಗಳನ್ನು ಸಲ್ಲಿಸಿದ್ದು, ಅದರಲ್ಲಿ ಎರಡು ಭಾರತೀಯ ಜನತಾ ಪಾರ್ಟಿ ಹಾಗೂ ಒಂದು ಹಿಂದುಸ್ತಾನ ಜನತಾ ಪಾರ್ಟಿಯಿಂದ ಸಲ್ಲಿಸಿರುತ್ತಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಶ್ರೀಕಾಂತ್ ಪಡಸಲಗಿ ಅವರು ನಾಮಪತ್ರವನ್ನು ಸಲ್ಲಿಸಿದರು.ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಅವರು ನಾಮಪತ್ರಗಳನ್ನು ಸ್ವೀಕರಿಸಿದರು.

 

Check Also

ಭೀಕರ ಅಪಘಾತ ರಸ್ರೆ ದುರಸ್ಥಿ ಮಾಡುತ್ತಿದ್ದ ಮೂವರ ಸಾವು

ಬೆಳಗಾವಿ-ರಾಷ್ಟ್ರೀಯ ಹೆದ್ದಾರಿ ನಾಲ್ಕು ಪುಣೆ ಬೆಂಗಳೂರು ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂ ಭವಿಸಿದೆ.ರಸ್ತೆಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಟ್ಯಾಂಕರ್ …

Leave a Reply

Your email address will not be published. Required fields are marked *