ಬೆಳಗಾವಿ- ಬೆಳಗಾವಿ ಲೋಕಸಭಾ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಮತಬೇಟೆಯ ಜವಾಬ್ದಾರಿಯನ್ನು ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ವಹಸಿಕೊಂಡಿದ್ದು,ಡಾ ಸೋನಾಲಿ ಗ್ರಾಮೀಣ ಮತಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ಡಾ.ಸೋನಾಲಿ ಸರ್ನೋಬತ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಶ್ಚಿಮ ಭಾಗದಲ್ಲಿ ಸಂಚರಿಸಿ ಮರಾಠಾ ಸಮುದಾಯದ ಮತಗಳನ್ನು ಸೆಳೆಯುವ ಕಸರತ್ತು ನಡೆಸಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹೆಚ್ಚಿನ ಮತಗಳನ್ನು ಪಡೆಯಲು ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದು ಈ ಕ್ಷೇತ್ರದಲ್ಲಿ ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ನಿರಂತರವಾಗಿ ಸಂಚರಿಸಿ ಹೊಸ ಸಂಚಲನ ಮೂಡಿಸುತ್ತಿದ್ದಾರೆ.
ಬೆಳಗಾವಿ ಸುದ್ಧಿ ಡಾಟ್ ಕಾಮ್ ಜೊತೆ ಮಾತನಾಡಿದ ಡಾ. ಸೋನಾಲಿ ಸರ್ನೋಬತ್ ದಿ.ಸುರೇಶ್ ಅಂಗಡಿ ಅವರ ಸರಳತೆ,ಎಲ್ಲರನ್ನು ಪ್ರೀತಿಸುವ ಉದಾರತೆ,ಅವರಲ್ಲಿದ್ದ ವಿನಯತೆ,ಸಾಮಾಜಿಕ ಕಳಕಳಿ,ಈ ಎಲ್ಲ ಗುಣಗಳು ಸುರೇಶ್ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರಲ್ಲಿವೆ. ಅವರಿಗೆ ವ್ಯಾಪಕ ಬೆಂಬಲ ವ್ಯೆಕ್ತವಾಗಿದ್ದು ಅವರು ಈ ಬಾರಿಯ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿ,ಬೆಳಗಾವಿ ಲೋಕಸಭಾ ಮತ ಕ್ಷೇತ್ರದ ಪ್ರಥಮ ಮಹಿಳಾ ಸಂಸದ ಸದಸ್ಯೆಯಾಗುವುದು ಖಚಿತ ಎಂದು ಡಾ.ಸೋನಾಲಿ ವಿಶ್ವಾಸ ವ್ಯೆಕ್ತಪಡಿಸಿದ್ದಾರೆ.