ಬೆಳಗಾವಿ- ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಣ ರಂಗೇರಿದೆ,ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರಾ ನೇರ ಯುದ್ಧ ನಡೆದಿದ್ದು,ಕಾಂಗ್ರೆಸ್ ಬೆಳಗಾವಿ ದಕ್ಷಿಣ ಕ್ಷೇತ್ರದ ಮರಾಠಾ ಸಮುದಾಯದ ಮತಗಳನ್ನು ಸೆಳೆಯಲು ಎಲ್ಲಿಲ್ಲದ ಕಸರತ್ರು ನಡೆಸಿದೆ.
ಬೆಳಗಾವಿ ದಕ್ಷಿಣ ಕ್ಷೇತ್ರ ಕಳೆದ ನಾಲ್ಕು ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಹೆಚ್ಚಿನ ಬಹುಮತ ನೀಡುವ ಮೂಲಕ ಈ ಕ್ಷೇತ್ರ ಬಿಜೆಪಿಯ ಮತಗಳ ಕಣಜ ಎಂದೇ ಕರೆಯಲ್ಪಡುತ್ತಿದ್ದು,ಈ ಕ್ಷೇತ್ರದಲ್ಲಿ ಮತಬೇಟೆಯಾಡಲು ಮರಾಠಾ ಸಮುದಾಯದ ಲೀಡರ್ ಗಳನ್ನು ಇಂಪೋರ್ಟ್ ಮಾಡಿಕೊಂಡಿದೆ.
ಬೆಳಗಾವಿ ದಕ್ಷಿಣದಲ್ಲಿ ಮರಾಠಾ,ಹಾಗೂ ಬ್ರಾಹ್ಮಣ ಸಮಾಜದ ಮತಗಳು ಹೆಚ್ಚಿವೆ ಹೀಗಾಗಿ ಈ ಎರಡೂ ಸಮುದಾಯದ ನಾಯಕರು ಈ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ,ಚುನಾವಣೆಯ ದಿನಾಂಕ ಘೋಷಣೆಯಾದ ಬಳಿಕ ಕಾಂಗ್ರೆಸ್ಸಿನ ಹಿರಿಯ ನಾಯಕ ಆರ್ ವ್ಹಿ ದೇಶಪಾಂಡೆ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲೇ ಠಿಖಾನಿ ಹೂಡಿದ್ದಾರೆ.
ಜೊತೆಗೆ ಕಾಂಗ್ರೆಸ್ ನಾಯಕ,ಅನೀಲ್ ಲಾಡ್ ಶಾಸಕಿ ಅಂಜಲಿ ನಿಂಬಾಳ್ಕರ್,ಶ್ರೀನಿವಾಸ ಮಾನೆ ಸೇರಿದಂತೆ ಕಾಂಗ್ರೆಸ್ಸಿನ ಘಟಾನುಘಟಿ ನಾಯಕರು ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಅವರ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಈ ಕ್ಷೇತ್ರದಲ್ಲಿ ವ್ಯೆವಸ್ಥಿತವಾಗಿ,ತಯಾರಿ ನಡೆಸಿದ್ದಾರೆ,ಈ ಕ್ಷೇತ್ರದಲ್ಲಿ ನಿರಂತರವಾಗಿ ಸಭೆಗಳನ್ನು ಮಾಡಿ,ಕಾರ್ಯಕರ್ತರ ಪಡೆಯೊಂದಿಗೆ ಬಿಜೆಪಿ ಕಣಜವನ್ನು ಇನ್ನಷ್ಟು ಭದ್ರ ಮಾಡಿಕೊಳ್ಳುವ ಪ್ರಯತ್ನ ಮುಂದುವರೆಸಿದ್ದಾರೆ.