ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿ,ಮತ್ತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಜಾರಿಗೆ ತಂದಿರುವ ಜನಪರ ಯೋಜನೆಗಳಿಗೆ,ಅಪಾರ ಜನಮೆಚ್ಚುಗೆ ವ್ಯೆಕ್ತವಾಗುತ್ತಿದೆ.ಇದರಿಂದ ಹತಾಶಗೊಂಡಿರುವ ಕಾಂಗ್ರೆಸ್ ಕೇವಲ ಟೀಕೆ ಮಾಡಿ ಜನರ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದು,ಟೀಕೆಗಳು ಸಾಯುತ್ತವೆ ಸಾಧನೆ ಉಳಿಯುತ್ತದೆ.ಎಂದು ಉಪ ಚುನಾವಣೆಯಲ್ಲಿ ಸಾಭೀತಾಗುತ್ತದೆ ಎಂದು ಬಿಜೆಪಿ ಮಹಿಳಾ ನಾಯಕಿ ಡಾ.ಸೋನಾಲಿ ಸರ್ನೋಬತ್ ಅಭಿಪ್ರಾಯ ಪಟ್ಟಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರ ಪರವಾಗಿ ಮತಯಾಚಿಸಿ ಮಾತನಾಡಿದ ಅವರು,ಬೆಳಗಾವಿ ಲೋಕಸಭಾ ಮತಕ್ಷೇತ್ರ ಬಿಜೆಪಿಯ ಭದ್ರಕೋಟೆ,ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಭದ್ರಕೋಟೆಯನ್ನು ಕಾಯುವ ಸೈನಿಕರು,ಕಾರ್ಯಕರ್ತರ ನಿಷ್ಠೆ,ಭದ್ರ ಕೋಟೆಯನ್ನು ಇನ್ನಷ್ಟು ಭದ್ರಗೊಳಿಸಲದ್ದು ಬೆಳಗಾವಿ ಲೋಕಸಭಾ ಮತ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಂಗಲಾ ಅಂಗಡಿ ದಾಖಲೆ ಮತಗಳ ಅಂತರದಿಂದ ಜಯಬೇರಿ ಬಾರಿಸಲಿದ್ದು,ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ಡಾ.ಸೋನಾಲಿ ಸರ್ನೋಬತ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲೆಗೆ ಅನೇಕ ಯೋಜನೆಗಳನ್ನು ಕೊಟ್ಟು ಹೊಸ ಇತಿಹಾಸ ನಿರ್ಮಿಸಿದ್ದಾರೆ,ಬೆಳಗಾವಿಯ ಸುವರ್ಣಸೌಧ,ಬೆಳಗಾವಿಯಲ್ಲಿ ನಿರ್ಮಾಣವಾಗುತ್ತಿರುವ ಹೈಟೆಕ್ ಬಸ್ ನಿಲ್ಧಾಣ,ಹೈಟೆಕೆ ರೇಲ್ವೆ ನಿಲ್ಧಾಣ,ಸೂಪರ್ ಸ್ಪೇಶ್ಯಾಲಿಟಿ ಆಸ್ಪತ್ರೆ,ಸ್ಮಾರ್ಟ್ ಸಿಟಿ ಕಾಮಗಾರಿಗಳು,ಪಾಲಿಕೆಯಿಂದ ನಡೆಯುತ್ತಿರುವ ನೂರು ಕೋಟಿ ರೂ ವಿಶೇಷ ಅನುದಾನದ ಕಾಮಗಾರಿಗಳು ಬಿಜೆಪಿ ಸಾಧನೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ ಕೊಡುಗೆಗಳನ್ನು ಬೆಳಗಾವಿ ಜಿಲ್ಲೆಯ ಜನ ಎಂದಿಗೂ ಮರೆಯಲು ಸಾದ್ಯವಿಲ್ಲ. ಎಂದು ಡಾ.ಸೋನಾಲಿ ಸರ್ನೋಬತ್ ಹೇಳಿದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ