ಬೆಳಗಾವಿ : ಕಳೆದ ಒಂದು ವಾರಗಳ ಕಾಲ ಬೆಳಗಾವಿಯಲ್ಲಿ ವಾತ್ಸವ್ಯ ಮಾಡಿ ಲೋಕಸಭಾ ಉಪ ಚುನಾವಣೆ ಹಿನ್ನಲೆಯ,ಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ಸಿಎಂ ಬಿಎಸ್ ವೈ ಅವರಿಗೆ ಕೊರೊನಾ ಸೋಂಕು ದೃಡಪಟ್ಟಿದೆ.
ನಿನ್ನೆ ಸಂಜೆಯಷ್ಟೆ ಬೆಳಗಾವಿಯಿಂದ ಬೆಂಗಳೂರಿಗೆ ತೆರಳಿದ್ದ ಸಿಎಂ ಇಂದು ಬೆಳಿಗ್ಗೆ ಎಮ್ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಕೊವಿಡ್ ತಪಾಸಣೆ ಮಾಡಿಸಿದ ಸಂದರ್ಭದಲ್ಲಿ ಅವರಿಗೆ ಸೋಂಕು ದೃಢವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಎರಡು ದಿನಗಳಿಂದ ಬೆಳಗಾವಿಯಲ್ಲಿ ಉಪ ಚುನಾವಣೆ ಪ್ರಚಾರದಲ್ಲಿ ಸುತ್ತಾಡಿದ್ದ ಸಿಎಂ ಯಡಿಯೂರಪ್ಪ ಜೊತೆ ಬಿಜೆಪಿ ಹಲವು ಮುಖಂಡರು ಜೊತೆಗಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಮುರುಗೇಶ ನಿರಾಣಿ, ಉಮೇಶ್ ಕತ್ತಿ, ಜಗದೀಶ್ ಶೆಟ್ಟರ್. ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಸಿಎಂ ಜೊತೆಗಿದ್ದರು. ಇಷ್ಟೇ ಅಲ್ಲದೆ ಅನೇಕ ಬಿಜೆಪಿ ಕಾರ್ಯಕರ್ತರು ಜೊತೆಗಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ