ರಾಜ್ಯದಲ್ಲಿ ಕೊರೋನಾ ಮೂರನೆಯ ಅಲೆ ಬರುತ್ತಿರುವ ಹಿನ್ನಲೆಯಲ್ಲಿ,ಪಕ್ಕದ ರಾಜ್ಯಗಳಲ್ಲಿ ಕೋವೀಡ್ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ,ಬೆಳಗಾವಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳಲ್ಲಿ ವಿಕೆಂಡ್ ಕರ್ಫ್ತು ಜೊತೆಗೆ ನೈಟ್ ಕರ್ಫ್ಯು ಜಾರಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂಗೆ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶಾಲೆ ಆರಂಭದ ಬಗ್ಗೆಯೂ ತಜ್ಞರ ಜೊತೆ ಚರ್ಚೆ ನಡೆಸಲಾಗಿದೆ. ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ನಾಳೆ ಇಲ್ಲವೇ ನಾಡಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡುವುಗುವುದು . ಸಚಿವರಿಗೆ ಇಂದೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಹ ಅವರು ತಿಳಿಸಿದರು. ಸದ್ಯದ ಕೊರೊನಾ ಪರಿಸ್ಥಿತಿ ಬಗ್ಗೆ ಕೊವಿಡ್ ಪರಿಣಿತರ ಸಭೆಯಲ್ಲಿ ಚರ್ಚೆ ನಡೆಸಿದ್ದಾಗಿ ಅವರು ತಿಳಿಸಿದರು.
ಮೊದಲ ಹಂತದಲ್ಲಿ 9, 10, 11, 12ನೇ ತರಗತಿ ಆರಂಭಿಸಲಾಗುವುದು. ಬ್ಯಾಚ್ ವೈಸ್ ತರಗತಿ ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ತೀವ್ರತೆ ನೋಡಿಕೊಂಡು ಮುಂದಿನ ನಿರ್ಧಾರ ಮಾಡುತ್ತೇವೆ. ಪ್ರಾಥಮಿಕ ಶಾಲೆ ಆರಂಭ ಬಗ್ಗೆ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.